ಪರಿಷತ್ ಚುನಾವಣೆ: ಎಚ್ ಡಿ ಕೆ -ಜಮೀರ್ ನಡುವೆ ಮತ್ತೆ ಬಿರುಕು

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗಿನ ಮೈತ್ರಿ ವಿಚಾರದಲ್ಲಿ ಜೆಡಿಎಸ್‌ನಲ್ಲಿ ಆಂತರಿಕ ಅಸಮಾಧಾನ ಭುಗಿಲೆದ್ದಿದೆ.....
ಎಚ್ .ಡಿ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್
ಎಚ್ .ಡಿ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗಿನ ಮೈತ್ರಿ ವಿಚಾರದಲ್ಲಿ ಜೆಡಿಎಸ್‌ನಲ್ಲಿ ಆಂತರಿಕ ಅಸಮಾಧಾನ ಭುಗಿಲೆದ್ದಿದೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ  ಕಾಂಗ್ರೆಸ್‌ ಜತೆ ಮೈತ್ರಿ ಕುರಿತಂತೆ ಮಾತುಕತೆ ನಡೆಸಲು ನಾನು ಯಾವ ಶಾಸಕರಿಗೂ ಹೇಳಿಲ್ಲ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಜೊತೆಗೆ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡರು ಹೇಳಿರುವ ವಿಷಯ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಸೂಚನೆ ಮೇರೆಗೇ ನಾನು ಮೈತ್ರಿ ಕುರಿತಂತೆ ದಿಗ್ವಿಜಯ್‌ ಸಿಂಗ್‌ ಜತೆ ಮಾತುಕತೆ ನಡೆಸಿದ್ದೆ' ಎಂದು ಪಕ್ಷದ ಶಾಸಕ ಜಮೀರ್‌ ಅಹಮದ್‌ ಸ್ಪಷ್ಟಪಡಿಸಿದ್ದಾರೆ.

ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಕಾಂಗ್ರೆಸ್‌ ಅಥವಾ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿಯೇ ಸ್ಪರ್ಧೆ ಮಾಡಬೇಕು. ಕಾಂಗ್ರೆಸ್‌ ಜತೆ ಮೈತ್ರಿಯ ಅವಶ್ಯಕತೆ ಇಲ್ಲ. ಶಾಸಕ ಜಮೀರ್‌ ಅಹಮದ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಮಾತುಕತೆ ನಡೆಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್‌ ಅಹಮದ್‌, ನಾನು ಪಕ್ಷದ ಒಬ್ಬ ಶಾಸಕ ಮಾತ್ರ. ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಹಾಗೂ ರಾಜಾಧ್ಯಕ್ಷರಾದ ಕುಮಾರಸ್ವಾಮಿ ಸೂಚನೆ ಇಲ್ಲದೆ ಕಾಂಗ್ರೆಸ್‌ ನಾಯಕರ ಜತೆ ಮಾತುಕತೆ ನಡೆಸಲು ಸಾಧ್ಯವೇ? ಅವರ ಸೂಚನೆ ಮೇರೆಗೇ ಮಾತುಕತೆ ನಡೆಸಿದ್ದೇನೆ ಎಂದು ಮೃದುವಾಗಿಯೇ ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com