ಏಜೆಂಟರು ಎಂದು ನಿಂದಿಸುವುದಾದರೇ ನಾವು ಯಾರಿಗಾಗಿ ಕೆಲಸ ಮಾಡುತ್ತಿದ್ದೇವೆ? ಕೂಡಲೇ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ನನ್ನ ಸೂಚನೆಗೆ ವಿರುದ್ಧವಾಗಿ ನಡೆದುಕೊಂಡಿದ್ದೀರಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಮ್ಮ ವಿರುದ್ಧ ಕ್ರಮಕ್ಕೆ ಆದೇಶಿಸಬೇಕು. ಇದನ್ನಾಧರಿಸಿ ಕುಮಾರಸ್ವಾಮಿ ಅವರು ಮೈತ್ರಿಗೆ ಯತ್ನಿಸದ ಎಲ್ಲಾ ಶಾಸಕರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.