ದೂರುದಾರರ ಮೇಲೆ ಕಣ್ಣಿಡಿ: ಆಪ್ತವರ್ಗಕ್ಕೆ ಸಿಎಂ ಸೂಚನೆ
ರಾಹುಲ್ ಗಾಂಧಿ ರಾಜ್ಯ ಪ್ರವಾಸ ಸಂದರ್ಭದಲ್ಲಿ ದೂರು- ಅಹವಾಲು ಸಲ್ಲಿಸಲು ಯಾವ ಶಾಸಕರು ದೂರು ನೀಡಲು ಮುಂದಾಗಬಹುದೆಂಬ ಬಗ್ಗೆ ರಹಸ್ಯ ಮಾಹಿತಿ ಸಂಗ್ರಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಹುಲ್ ಗಾಂಧಿ ರಾಜ್ಯ ಪ್ರವಾಸ ಸಂದರ್ಭದಲ್ಲಿ ದೂರು- ಅಹವಾಲು ಸಲ್ಲಿಸಲು ಯಾವ ಶಾಸಕರು ದೂರು ನೀಡಲು ಮುಂದಾಗಬಹುದೆಂಬ ಬಗ್ಗೆ ರಹಸ್ಯ ಮಾಹಿತಿ ಸಂಗ್ರಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಹುಲ್ ಗಾಂಧಿ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಆಂತರಿಕ ಚಟುವಟಿಕೆಗಳು ಮಗುಮ್ಮಾಗಿ ನಡೆಯುತ್ತಿದೆ. ಹಲವು ಶಾಸಕರು ಹಾಗೂ ಕೆಲ ಸಚಿವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಭಿಪ್ರಾಯ ನೀಡುವುದಕ್ಕೆ ಸಿದ್ಧರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾರು ದೂರು ನೀಡಬಹುದೆಂಬ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ತಮ್ಮ ಆಪ್ತ ವರ್ಗಕ್ಕೆ ಸೂಚನೆ ನೀಡಿದ್ದಾರೆ. ಜತೆಗೆ ರಾಜ್ಯ ಗುಪ್ತದಳದ ರಾಜಕೀಯ ವಿಭಾಗದ ಸಿಬ್ಬಂದಿಗಳೂ ಈ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಂಭಾವ್ಯ ದೂರುದಾರರನ್ನು ಮೊದಲೇ ಗುರುತಿಸಿ ಅವರ ಆಕ್ರೋಶವನ್ನು ಶಮನಗೊಳಿಸುವುದು ಈ ಮಾಹಿತಿ ಸಂಗ್ರಹಣೆಯ ಹಿಂದಿನ ಉದ್ದೇಶ ಎಂದು ತಿಳಿದುಬಂದಿದೆ.
ಒಂದೊಮ್ಮೆ ತಮ್ಮ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಶಾಸಕರು ದೂರು ನೀಡಿದರೆ ರಾಷ್ಟ್ರೀಯ ನಾಯಕರ ಎದುರು ತಮಗೆ ಮುಜುಗರವಾಗುತ್ತದೆ ಎಂಬುದು ಸಿಎಂ ಸಿದ್ದರಾಮಯ್ಯ ಅವರ ಲೆಕ್ಕಾಚಾರ. ಒಮ್ಮೆ ಇಂಥ ಘಟನೆ ನಡೆದರೆ ತಮ್ಮ ವಿರುದ್ಧ ಬರುವ ದೂರುಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ಅವಕಾಶ ತಪ್ಪಬಹುದೆಂದು ಚಿಂತಿಸಿರುವ ಸಿಎಂ ಸಿದ್ದರಾಮಯ್ಯ ಅವರ ಬಣ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಈ ಕ್ರಮಕ್ಕೆ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


