ರಾಹುಲ್ ಸಲಹೆ ಆಧರಿಸಿ ಸಾಲ ಮನ್ನಾ ನಿರ್ಣಯ

ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ವಿಚಾರ ದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಸಂದರ್ಭದಲ್ಲಿ...
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್
Updated on: 
 ಬೆಂಗಳೂರು:  ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ವಿಚಾರ ದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಸಂದರ್ಭದಲ್ಲಿ ನೀಡುವ ಸಲಹೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಆರಂಭಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ವಿಚಾರದಲ್ಲಿ ನಮ್ಮ ಬಿಜೆಪಿ ಮುಖಂಡರು ದ್ವಂದ್ವ ನೀತಿ ಪಾಲಿಸುತ್ತಿದ್ದಾರೆ. ಅವರಿಗೆ ನಿಜವಾಗಿಯೂ ರೈತರ ಮೇಲೆ ಕಾಳಜಿ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಲಿ ಎಂದು ಆಗ್ರಹಿಸಿದರು.ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ರು.70 ಸಾವಿರ ಕೋಟಿ ಸಾಲವನ್ನು ರಾಷ್ಟ್ರಾದ್ಯಂತ ಮನ್ನಾ ಮಾಡಿದ್ದರು. ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ರೈತರ ಬದ್ಧತೆ ಇದ್ದರೆ ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿ ರೈತರ ಪಡೆದಿರುವ ಸಾಲವನ್ನು ಮನ್ನಾ ಮಾಡಲಿ ಎಂದು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸ ಸಂದರ್ಭದಲ್ಲಿ ನೀಡುವ ಸಲಹೆಯನ್ನು ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com