ಕೇಂದ್ರ ಬಿಡಿಗಾಸೂ ನೀಡಿಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ರಾಜ್ಯದಲ್ಲಿ ಹಿಂದೆಂದೂ ಕಾಣದ ಬರ ಆವರಿಸಿದರೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ರಾಜ್ಯದಲ್ಲಿ ಹಿಂದೆಂದೂ ಕಾಣದ ಬರ ಆವರಿಸಿದರೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೀವ್ರ ಬರ ಪರಿಸ್ಥಿತಿಯಿಂದ ರಾಜ್ಯ ತತ್ತರಿಸಿರುವುದನ್ನು ಕೇಂದ್ರ ಅಧ್ಯಯನ ತಂಡ ಕಣ್ಣಾರೆ ನೋಡಿದೆ. ಎರಡು ತಿಂಗಳ ಹಿಂದೆಯೇ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡಿ ಪರಿಸ್ಥಿತಿ ತಿಳಿದುಕೊಂಡಿದೆ. ಆದರೆ ಈತನಕ ಬಿಡಿಗಾಸು ಪರಿಹಾರವಾಗಿ ನೀಡಿಲ್ಲ ಎಂದು ಸಿದ್ದರಾಮಯ್ಯ ನೇರವಾಗಿ ಆರೋಪಿಸಿದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರಿಗೆ ಮಾತನಾಡಿದ ಅವರು, ಕೇಂದ್ರ ತಂಡ ಸೆಪ್ಟೆಂಬರ್‍ನಲ್ಲೇ ರಾಜ್ಯದ ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಿದರೂ ಕೇಂದ್ರ ಸರ್ಕಾರ ಇನ್ನೂ ನೆರವು ಬಿಡುಗಡೆ ಮಾಡಿಲ್ಲ.ಆದರೂ ನಾವು ಇನ್ನೂ ಕೆಲ ಕಾಲ ನಿರೀಕ್ಷೆ ಮಾಡುತ್ತೇವೆ ಎಂಬ ಸಹನೆಯ ಮಾತನಾಡಿದರು. ಕಳಸಾ-ಬಂಡೂರಿ ಯೋಜನೆ ಬಗ್ಗೆ ಸರ್ಕಾರ ಎಲ್ಲ ಅಗತ್ಯ ಕ್ರಮಕೈಗೊಳ್ಳುತ್ತಿದ್ದು, ಕೇಂದ್ರಕ್ಕೆ ಈಗಾಗಲೇ ನಿಯೋಗ ತೆರಳಿ ಸಮಸ್ಯೆ ಮನವರಿಕೆ ಮಾಡಲಾಗಿದೆ. ಆದರೂ ಮತ್ತೆ ಸರ್ವಪಕ್ಷಗಳ ಸಭೆ ಕರೆದು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಾಗುತ್ತದೆ. ಸಾಧ್ಯವಾದರೆ ದಸರಾ ನಂತರ ಸಭೆ ನಡೆಸುವ ಬಗ್ಗೆ ಚಿಂತನೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಕಲಬುರ್ಗಿ ಹತ್ಯೆ ಖಂಡಿಸಿ ಸಾಹಿತಿಗಳು, ಪತ್ರಕರ್ತರು ಪ್ರಶಸ್ತಿ ಮರಳಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಲೇಖಕರು ಪ್ರತಿಭಟನೆ ನಡೆಸುವುದು ತಪ್ಪಲ್ಲ, ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ ಅವರು ಪ್ರಶಸ್ತಿ ವಾಪಸ್ ನೀಡುತ್ತಿರುವುದು ಸರಿಯಲ್ಲ. ಸಾಹಿತಿಗಳಿಗೆ ಪ್ರಶಸ್ತಿ ನೀಡಿರುವುದು ಅವರ ಜೀವಮಾನದ ಸಾಧನೆಗಾಗಿ. ಆದ್ದರಿಂದ ಪ್ರಶಸ್ತಿ ವಾಪಸ್ ಕೊಡುವುದು ಸರಿಯಲ್ಲ ಎಂದರು. ಕೇಂದ್ರ ಬಿಡಿಗಾಸೂ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com