ಖಾಸಗಿ ಕ್ಷೇತ್ರದಲ್ಲೂ ಮೀಸಲು ಅಗತ್ಯ: ಸಿಎಂ

ಖಾಸಗಿ ಕ್ಷೇತ್ರದಲ್ಲೂ ಅವಕಾಶ ವಂಚಿತರಿಗೆ ಮೀಸಲಾತಿ ದೊರಕಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಪಾದಿಸಿದರು. ಗಾಂಧಿ ಭವನದಲ್ಲಿ ಭಾನುವಾರ...
ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಿಎಂ ಸಿದ್ಧರಾಮಯ್ಯ ( ಕೃಪೆ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ )
ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಿಎಂ ಸಿದ್ಧರಾಮಯ್ಯ ( ಕೃಪೆ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ )
ಬೆಂಗಳೂರು:  ಖಾಸಗಿ ಕ್ಷೇತ್ರದಲ್ಲೂ ಅವಕಾಶ ವಂಚಿತರಿಗೆ ಮೀಸಲಾತಿ ದೊರಕಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಪಾದಿಸಿದರು.  ಗಾಂಧಿ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮತ್ತು ಸಮ ಸಮಾಜ ವೇದಿಕೆ ಸಂಯುಕ್ತಾಶ್ರಯದಲ್ಲಿ `ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ' ಕುರಿತು ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಉದಾರೀಕರಣ, ಜಾಗತೀಕರಣ, ಖಾಸಗೀಕರಣ (ಹೊಸ ಆರ್ಥಿಕ ನೀತಿ) ಕ್ಕೆ ಹೆಚ್ಚು ಒತ್ತು ನೀಡಿದ ಮೇಲೆ ಮೀಸಲಾತಿಗೆ ಮಹತ್ವ ಕಡಿಮೆಯಾ
ಗುತ್ತಿದೆ. ಈ ಹೊಸ ಆರ್ಥಿಕ ನೀತಿಯಿಂದ ಖಾಸಗಿ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಅಂತೆಯೇ ಸರ್ಕಾರಿ ವಲಯದಲ್ಲಿ ಉದ್ಯೋಗ ಕಡಿಮೆಯಾಗುತ್ತಿದೆ. ಒಂದು ವೇಳೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ದೊರೆಯದಿದ್ದರೆ ಅವಕಾಶ ವಂಚಿತರಿಗೆ ಅನ್ಯಾಯವಾಗುತ್ತದೆ. ಈ ಹಿಂದೆ ಉತ್ತರಪ್ರದೇಶದ ಮುಖ್ಯಮಂತ್ರಿ  ಮಾಯಾವತಿಯವರು ಖಾಸಗಿ ವಲಯ-ದಲ್ಲಿ ಮೀಸಲಾತಿ ಕಲ್ಪಿಸುವ ಸಾಹಸಕ್ಕೆ ಕೈ ಹಾಕಿದ್ದರು. ಆದರೆ, ಇದರ ವಿರುದ್ಧ ಪ್ರಕರಣ ದಾಖಲಾಗಿ ಸುಪ್ರಿಂಕೋರ್ಟ್‍ವರೆಗೂ ಹೋಯಿತು. ಆದ್ದರಿಂದ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಕುರಿತಂತೆ ರಾಷ್ಟ್ರ ಮಟ್ಟ-ದಲ್ಲಿ ಚಿಂತನೆಯಾಗಬೇಕೆಂದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್. ಆರ್.ನಾಯಕ್ ಮಾತನಾಡಿ, ಶತಮಾನಗಳಿಂದ ತುಳಿತಕ್ಕೊಳಗಾದವರಿಗೆ ಸಂವಿಧಾನ ಕಲ್ಪಿಸಿರುವ ಮೀಸಲಾತಿಗೆ ಅಡ್ಡಗಾಲು ಹಾಕುವವರು ಹೆಚ್ಚಾಗುತ್ತಿದ್ದಾರೆ. ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೆ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದ್ದು, ರಾಷ್ಟ್ರ ನಾಯಕರು ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕು ಎಂದು ಸಲಹೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಮಾಜಿ ಶಾಸಕ ಎ.ಕೆ.ಸುಬ್ಬಯ್ಯ, ವಿಧಾನ ಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ, ವಿ.ಎಸ್.ಉಗ್ರಪ್ಪ, ಸಂಸದ ಚಂದ್ರಪ್ಪ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com