ದಾದ್ರಿ, ಕಲ್ಬುರ್ಗಿ ಹತ್ಯೆ ಪ್ರಕರಣಗಳಿಗೆ ರಾಜ್ಯ ಸರ್ಕಾರಗಳೇ ಹೊಣೆ: ಅಮಿತ್ ಶಾ

ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಕರ್ನಾಟಕದ ಸಾಹಿತಿ ಕಲ್ಬುರ್ಗಿ ಹತ್ಯೆ ಹಾಗೂ ದಾದ್ರಿಯ ಪ್ರಕರಣಗಳಿಗೆ ಕೇಂದ್ರ ಸರ್ಕಾರ ಹೊಣೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಪಾಟ್ನಾ: ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಕರ್ನಾಟಕದ ಸಾಹಿತಿ ಕಲ್ಬುರ್ಗಿ ಹತ್ಯೆ ಹಾಗೂ ದಾದ್ರಿಯ ಪ್ರಕರಣಗಳಿಗೆ ಕೇಂದ್ರ ಸರ್ಕಾರ ಹೊಣೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬಿಹಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಎರಡೂ ಪ್ರಕರಣಗಳು ನಡೆದಿರುವುದು ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ. ಆದ್ದರಿಂದ ಬಿಜೆಪಿಯನ್ನು ದೂರಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರದಲ್ಲಿವೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿರುವುದು ರಾಜ್ಯ ಸರ್ಕಾರಗಳ ಕಾರಣವಾದ್ದರಿಂದ ಕೇಂದ್ರ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದಿದ್ದಾರೆ ಅಮಿತ್ ಶಾ. 
ಮೀಸಲಾತಿ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅಮಿತ್ ಶಾ, ಪ್ರಸ್ತುತ ಇರುವ ಮೀಸಲಾತಿ ವ್ಯವಸ್ಥೆಯನ್ನು ಬಿಜೆಪಿ ಬೆಂಬಲಿಸುತ್ತದೆ ಎಂದಿದ್ದಾರೆ. ಮೀಸಲಾತಿ ನಿಯಮಗಳನ್ನು ಮತ್ತೆ ಪರಿಶೀಲನೆ ನಡೆಸಬೇಕಿದೆ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com