ರಾಜಕೀಯ

ಬಿಹಾರ: ಬಿಜೆಪಿ ಸೇರಿದ ಜೆಡಿಯು ನಾಯಕ

ಚುನಾವಣಾ ಕಣವಾಗಿರುವ ಬಿಹಾರದಲ್ಲಿ ಜೆಡಿಯು ಬಂಡಾಯ ನಾಯಕ, ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಹಾರ: ಬಿಜೆಪಿ ಸೇರಿದ ಜೆಡಿಯು ನಾಯಕ
ಬಿಜೆಪಿ
Published On :

ಪಾಟ್ನಾ: ಚುನಾವಣಾ ಕಣವಾಗಿರುವ ಬಿಹಾರದಲ್ಲಿ ಜೆಡಿಯು ಬಂಡಾಯ ನಾಯಕ, ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಹಾರದಲ್ಲಿ ಈಗಾಗಲೇ ಎರಡು ಹಂತದ ಚುನಾವಣೆ ಮುಕ್ತಾಯಗೊಂಡಿದ್ದು ಮೂರನೆ ಹಂತದ ಚುನಾವಣೆ ನಡೆಯಬೇಕಿದೆ. ಚುನಾವಣೆ ವೇಳೆ ಜೆಡಿಯು ನಾಯಕ ಭೀಮ್ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿರುವುದು ಜೆಡಿಯುಗೆ ಹಿನ್ನಡೆ ಉಂಟಾದಂತಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮಂಗಲ್ ಪಾಂಡೆ  ನೇತೃತ್ವದಲ್ಲಿ ಭೀಮ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಹಾರ ವಿಧಾನಪರಿಷತ್ ನ ಜೆಡಿಯು ಸದಸ್ಯರಾಗಿದ್ದ ಸಿಂಗ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಅಹಂಕಾರಿಯಾಗಿದ್ದರಿಂದ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಕ್ಟೋಬರ್ 28 ರಂದು ಬಿಹಾರದಲ್ಲಿ ಮೂರನೇ ಹಂತದ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.