ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
ರಾಹುಲ್ ಗಾಂಧಿ(ಸಂಗ್ರಹ ಚಿತ್ರ)

ದಲಿತ ಸಿಎಂ: ರಾಹುಲ್ ಗಾಂಧಿಗೆ ಪತ್ರ

ಸಂಪುಟ ವಿಸ್ತರಣೆ ಕಸರತ್ತು ಚುರುಕಾಗುತ್ತಿದ್ದಂತೆ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮೀ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.
Published on

ಬೆಂಗಳೂರು: ಸಂಪುಟ ವಿಸ್ತರಣೆ ಕಸರತ್ತು ಚುರುಕಾಗುತ್ತಿದ್ದಂತೆ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ದಲಿತ ನಾಯಕರಾದ ಬಸವಲಿಂಗಪ್ಪ ಮತ್ತು ಕೆಹೆಚ್ ರಂಗನಾಥ್ ರನ್ನು ಕಾಂಗ್ರೆಸ್ ಸಿಎಂ ಮಾಡಲಿಲ್ಲ ಎನ್ನುವ ಬಗ್ಗೆ ದಲಿತರಿಗೆ ಆಕ್ರೋಶವಿದೆ. ಅದನ್ನು ಶಮನಗೊಳಿಸಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಬೆಂಬಲಿಸುವಂತಾಗಲು ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅಥವಾ ಡಾ.ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಜೆಡಿಎಸ್ ನಿಂದ ಹೊರಬಂದಾಗ, ಅಂದು ಪ್ರತಿಪಕ್ಷ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನವನ್ನು ಸಿದ್ದರಾಮಯ್ಯ ಅವರಿಗೆ ತ್ಯಾಗ ಮಾಡಿದರು. ಅದೇ ರೀತಿ ಕಳೆದ ಚುನಾವಣೆಯಲ್ಲಿ ದಲಿತರ ಮತಗಳನ್ನು ಸೆಳೆಯುವಲ್ಲಿ ಡಾ.ಪರಮೇಶ್ವರ್ ಯಶಸ್ವಿಯಾಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಅನುಭವಿಸಿದ್ದಾರೆ. ಇನ್ನುಳಿದ ಅವಧಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com