ಸಿದ್ದು ಸಂಪುಟದಿಂದ ಅಂಬಿಗೆ ಕೊಕ್, ರಮ್ಯಾಗೆ ಸಚಿವ ಸ್ಥಾನ?

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಸಚಿವ ಅಂಬರೀಷ್ ಅವರನ್ನು...
ರಮ್ಯಾ
ರಮ್ಯಾ
Updated on: 

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಸತಿ ಸಚಿವ ಅಂಬರೀಷ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಆ ಸ್ಥಾನಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರನ್ನು ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಅಥವಾ ಪನಾರಚನೆ ಸಂಬಂಧ ಈಗಾಗಲೇ ದೆಹಲಿಯಲ್ಲಿರುವ ಸಿಎಂ, ಇಂದು ಸಂಜೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬ ಗೊಂದಲದ ನಡೆಯೂ ರಮ್ಯಾ ಅವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡಿ, ನಂತರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳ ತಿಳಿಸಿವೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರು ಅಂಬರೀಷ್ ಅವರನ್ನು ಕೈಬಿಟ್ಟು, ಆ ಸ್ಥಾನಕ್ಕೆ ರಮ್ಯಾ ಅವರನ್ನು ಕರೆತರುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂಧ ದೆಹಲಿಯಲ್ಲಿ ಸರಣಿ ಸಭೆ ನಡೆದರೂ ಇನ್ನೂ ಒಮ್ಮತ ಮೂಡಿಲ್ಲ. ಹೀಗಾಗಿ ಸಚಿವ ಸಂಪುಟ ಕಸರತ್ತಿಗೆ ಸಂಬಂಧಿಸಿದಂತೆ ನಿಖರ ಉತ್ತರ ಸಿಕ್ಕ ಮೇಲಷ್ಟೇ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com