
ಬೆಂಗಳೂರು: ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಪರಮೇಶ್ವರ ಅವರನ್ನು ಅಭಿನಂದಿಸಲು ಇಂದು ಅರಮನೆ ಮೈದಾನದಲ್ಲಿ ಸಾರ್ಥಕ ಸಮಾವೇಶ ನಡೆಸಲಾಯಿತು. ಈ ವೇಳೆ ಪರಮೇಶ್ವರ ಅವರನ್ನು ಅಭಿನಂದಿಸಿ ಮಾತನಾಡಿದ ಸಿಎಂ, ವಿಧಾನಸಭೆ ಚುನಾವಣೆಯಿಂದ ಇದುವರೆಗೂ ಇಬ್ಬರೂ ಹೊಂದಾಣಿಕೆಯಿಂದ ಕೆಲಸ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯ ಯಾವುದೇ ಭಿನ್ನಾಭಿಪ್ರಾ ಇಲ್ಲ ಎಂದರು.
ಪರಮೇಶ್ವರ ಅವರು ಕಾಂಗ್ರೆಸ್ ಗೆಲುವಿಗಾಗಿ 'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಇದರಿಂದ ರಾಜ್ಯದಲ್ಲಿ ಬದಲಾವಣೆಯ ಹಾಳಿ ಬೀಸಲು ಪ್ರಾರಂಭಿಸಿತು. ಇದಕ್ಕೂ ಮುನ್ನ ನಡೆಸಿದ ಬಳ್ಳಾರಿ ಪಾದಯಾತ್ರೆಯೂ ನಮ್ಮ ಗೆಲುವಿಗೆ ಕಾರಣವಾಯಿತು ಎಂದರು.
Advertisement