
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಪೊರೇಟರ್‌ಗಳಿಬ್ಬರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ಹಂಪಿನಗರ ಕಾರ್ಪೊರೇಟರ್ ಆನಂದ್ ಹೊಸೂರು ಹಾಗೂ ಮಾರೇನಹಳ್ಳಿ ಬಿಜೆಪಿ ಕಾರ್ಪೊರೇಟರ್ ಮಧುಕಮಾರಿ ಪತಿ ವಾಗೀಶ್ ಅವರು ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ವಾಗೀಶ್ ಅವರು, ರಾಜಕೀಯ ಉದ್ದೇಶದಿಂದ ನಾವು ಸಚಿವರನ್ನು ಭೇಟಿಯಾಗಿಲ್ಲ ಮತ್ತು ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಿಲ್ಲ. ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚಿಸಲು ತೆರಳಿದ್ದೇವು ಎಂದಿದ್ದಾರೆ.
ಸೆಪ್ಟೆಂಬರ್ 11ರಂದು ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದೆ.
Advertisement