ಬರ: ಹೈಕಮಾಂಡ್‍ಗೆ "ಕೈ" ವರದಿ

ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆಪಿಸಿಸಿ ಸಭೆಯಲ್ಲಿ ಅಧ್ಯಕ್ಷ ಜಿ.ಪರಮೇಶ್ವರ
ಕೆಪಿಸಿಸಿ ಸಭೆಯಲ್ಲಿ ಅಧ್ಯಕ್ಷ ಜಿ.ಪರಮೇಶ್ವರ

ಬೆಂಗಳೂರು: ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿಪರಮೇಶ್ವರ ಅವರು ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವರದಿಕೊಡುವಂತೆ ಸೂಚಿಸಿದ್ದಾರೆ. ಲೋಕಸಭಾ ಕಲಾಪದಲ್ಲಿ  ಅವರುಈ ವಿಚಾರ ಪ್ರಸ್ತಾಪ ಮಾಡಿ ಕೇಂದ್ರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ಸಕ್ರಿಯರಾಗಿ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ವರದಿ ನೀಡಬೇಕು. ನಾವು ಈ ಮಾಹಿತಿಯನ್ನು ವರಿಷ್ಠರಿಗೆ ರವಾನೆ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಸಮರ್ಪಕವಾಗಿ ನಡೆದಿಲ್ಲ.  ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಈಗ ಸದಸ್ಯತ್ವ ನೋಂದಣಿ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಎಲ್ಲರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸಲಹೆ ನೀಡಿದರು.

ರಮೇಶ್ ವಿರುದ್ಧ ಆಕ್ರೋಶ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಪಿ. ರಮೇಶ್ ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಸೋಲಿಗೆ ಅವರು  ಬೆಂಬಲ ನೀಡಿದ್ದಾರೆ. ಹೀಗಾಗಿ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com