2ನೇ ಹಂತದ ರೈತ ಚೈತನ್ಯ ಯಾತ್ರೆ

ಎರಡನೇ ಹಂತದ ರೈತ ಚೈತನ್ಯ ಯಾತ್ರೆಯು ಅಕ್ಟೋಬರ್ 1ರಿಂದ 11ರ ವರೆಗೆನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ...
ರೈತ ಚೈತನ್ಯ ಯಾತ್ರೆ (ಸಂಗ್ರಹ ಚಿತ್ರ)
ರೈತ ಚೈತನ್ಯ ಯಾತ್ರೆ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಎರಡನೇ ಹಂತದ ರೈತ ಚೈತನ್ಯ ಯಾತ್ರೆಯು ಅಕ್ಟೋಬರ್ 1ರಿಂದ 11ರ ವರೆಗೆನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ರೈತರಲ್ಲಿ ವಿಶ್ವಾಸ ಮೂಡಿಸುವುದು ಹಾಗೂ ಸರ್ಕಾರ ಎಚ್ಚರಿಸಲು ಅ.1ರಂದು ಬಳ್ಳಾರಿಯಿಂದ 2 ನೇ ಹಂತದ ರೈತ ಚೈತನ್ಯ ಯಾತ್ರೆಗೆ ಚಾಲನೆ ಲಭಿಸಲಿದ್ದು, ಅ.11ರಂದು ನರಗುಂದದಲ್ಲಿ  ಮುಕ್ತಾಯಗೊಳ್ಳಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು. ಒಟ್ಟು 3 ತಂಡಗಳಲ್ಲಿ ಯಾತ್ರೆ ನಡೆಯಲಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಚೈತನ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರ ಕ್ಷಾಮವಿದ್ದರೂ ಸಚಿವರು ಹಾಗೂ ಶಾಸಕರು ಸಚಿವ ಸಂಪುಟ ವಿಸ್ತರಣೆ ಕಸರತ್ತಿನಲ್ಲಿ ಮಗ್ನರಾಗಿದ್ದಾರೆ. ರಾಷ್ಟ್ರ ಹಾಗೂ ರಾಜ್ಯ ರಾಜಧಾನಿಗಳ ನಡುವೆ ಓಡಾಟ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಜನರ ಗಮನ ಬೇರೆಡೆ ಸೆಳೆಯಲು ಸಂಪುಟ ಪುನಾರಚನೆ ಸುದ್ದಿ ತೇಲಿಬಿಟ್ಟಿದ್ದಾರೆ. ಬಹುತೇಕ ಎಲ್ಲಾ ಶಾಸಕರು ಹಾಗೂ ಸಚಿವರು ತಮ್ಮ ಕ್ಷೇತ್ರಗಳನ್ನೇ  ಮರೆತಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ ಮುಖ್ಯಮಂತ್ರಿಗಳು ಆದ್ಯತೆ ನೀಡುವ ಬದಲು ಸಂಪುಟ ಪುನಾರಚನೆಗೆ ಆದ್ಯತೆ ನೀಡುವ ಮೂಲಕ ಸಿದ್ದರಾಮಯ್ಯ ಅವರ ಬಹುಕಾಲದ ರಾಜಕೀಯ  ಅನುಭವ ಪ್ರದರ್ಶಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com