
ಪಾಟ್ನಾ: ಬಿಹಾರ ಚುನಾವಣೆಗೆ ಬಿಜೆಪಿ ಹಣ ಪಡೆದು ಕಳಂಕಿತರಿಗೆ ಟಿಕೆಟ್ ಹಂಚಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ ಸಂಸದ ಆರ್.ಕೆ ಸಿಂಗ್, ಕಳಂಕಿತರ ಪರ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಜನಪ್ರಿಯ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ, ಕಳಂಕಿತರನ್ನು ಕಣಕ್ಕಿಳಿಸಿದೆ. ಬಿಜೆಪಿ ನಾಯಕರ ಈ ನಡೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಅಸಮಾಧಾನ ಮೂಡಿಸಿದೆ. ಕಳಂಕಿತರ ವಿರುದ್ಧ ಪ್ರಚಾರ ನಡೆಸುವುದಿಲ್ಲ ಎಂದು ಆರ್.ಕೆ ಸಿಂಗ್ ತಿಳಿಸಿದ್ದಾರೆ.
ಈ ಹಿಂದೆ ಗೃಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಸಿಂಗ್, ಬಿಜೆಪಿ ಸೇರ್ಪಡೆಗೊಂಡಿದ್ದರು. ಸಿಂಗ್ ರಜಪೂತರ ಸಮುದಾಯಕ್ಕೆ ಸೇರಿದವರಾಗಿದ್ದು ಬಿಹಾರದಲ್ಲಿ ನಿರ್ಣಾಯಕ ಸಮುದಾಯವಾಗಿದ್ದು, ಚುನಾವಣೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಕಳಂಕಿತರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಆರ್.ಕೆ ಸಿಂಗ್ ಆರೋಪಿಸಿರುವುದರಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ.
Advertisement