
ಹುಬ್ಬಳ್ಳಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ರಾಹುಲ್ ಗಾಂಧಿ ರಾಜ್ಯಕ್ಕೆ ಬಂದುಹೋದ ಬಳಿಕವಷ್ಟೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಅಕ್ಟೋಬರ್ 9ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅವರು ದೆಹಲಿಗೆ ಹಿಂತಿರುಗಿದ ಬಳಿಕವಷ್ಟೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚಿಂತಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
Advertisement