ಎಸಿಬಿ ರಚನೆ ಖಂಡಿಸಿ ನಾಳೆ ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ

ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿರುವ ಸರ್ಕಾರದ ಕ್ರಮವನ್ನು...
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
Updated on: 
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ ನಡೆಸಲಿದೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಮೌರ್ಯ ಹೋಟೆಲ್ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪಾದಯಾತ್ರೆ ನಡೆಸಲು ಜೆಡಿಎಸ್ ತೀರ್ಮಾನಿಸಿದೆ.
ಈ ಕುರಿತು ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಲೋಕಾಯುಕ್ತ ಸಂಸ್ಥೆಯನ್ನು ಶಕ್ತಿಹೀನಗೊಳಿಸುವ ಹುನ್ನಾರವನ್ನು ಸರ್ಕಾರ ಹೊಂದಿದೆ. ಲೋಕಾಯುಕ್ತ ಸಂಸ್ಥೆ ಹುಟ್ಟು ಹಾಕಿದ್ದ ಉದ್ದೇಶವನ್ನೇ ರಾಜ್ಯ ಸರ್ಕಾರವು ಎಸಿಬಿ ರಚಿಸುವ ಮೂಲಕ ಹಾಳಿ ಮಾಡಿದೆ. ಈ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾ ರ್ಯಾಲಿ ನಡೆಸಲಿದ್ದು, ತದ ನಂತರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
2018ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ, ಎಸಿಬಿ ರದ್ದು ಮಾಡುವುದು ನಮ್ಮ ಮೊದಲ ಆದ್ಯತೆ ಆಗಿರುತ್ತದೆ ಎಂದ ಅವರು, ಲೋಕಾಯುಕ್ತ ಕಾಯ್ದೆ 1984ಯಡಿ ಸಿಗಬೇಕಾದ ಎಲ್ಲಾ ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ಪುನಃ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com