ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ದಿಗ್ವಿಜಯ್ ಸಿಂಗ್ ಅವರು ರಾಜ್ಯಕ್ಕೆ ಬರ್ತಾರೆ.. ಹೋಗ್ತಾರೆ. ಅವರು ಸರ್ಕಾರವನ್ನು ಯಾವತ್ತೂ ವಿಮರ್ಶೆಗೆ ಒಳಪಡಿಸಿದವರಲ್ಲ. ಹೀಗಾಗಿ ಅವರನ್ನು ಬದಲಾವಣೆ ಮಾಡಬೇಕು ಎಂದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾಗಿ ಕೆಲಸ ಮಾಡದ ಅಸಮರ್ಥ ಸಚಿವರನ್ನು ತಮ್ಮ ಸಂಪುಟದಿಂದ ಕೈಬಿಡಬೇಕು ಎಂದು ಸಹ ವಿಶ್ವನಾಥ್ ಆಗ್ರಹಿಸಿದ್ದಾರೆ.