ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಅಧಿಕಾರ ಸ್ವೀಕಾರ

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು...
ಯಡಿಯೂರಪ್ಪ
ಯಡಿಯೂರಪ್ಪ
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ 125ನೇ ಜನ್ಮ ದಿನಾಚರಣೆ ದಿನವಾದ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಹ್ಲಾದ್ ಜೋಷಿ ಅವರು ಯಡಿಯೂರಪ್ಪನವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಯಡಿಯೂರಪ್ಪನವರು ಇಂದು ಸಂಜೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನಾಲ್ಕನೇ ಬಾರಿಗೆ ನನಗೆ ಉನ್ನತ ಅಧಿಕಾರ ನೀಡಿದೆ. ಸದ್ಯ ನನಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತೇನೆ. ಅಲ್ಲದೆ 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com