ಸರ್ಕಾರದ ನಿರ್ಧಾರಕ್ಕೆ ಹೆದರಲ್ಲ, ನ್ಯಾಯಾಂಗದ ಮೇಲೆ ನಂಬಿಕೆ ಇದೆ: ಬಿಎಸ್ ವೈ

ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ...
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಖಂಡಿಸಿದ್ದಾರೆ.
ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯ್ಲಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ನಾನು ನಿರೀಕ್ಷಿಸಿದಂತೆ ನನ್ನ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಿದೆ. ಆ ಮೂಲಕ ರಾಜ್ಯ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದರು.
ಶೇ.101ರಷ್ಟು ಇದು ನನ್ನ ವಿರುದ್ಧದ ಸೇಡಿನ ರಾಜಕಾರಣ. ಸರ್ಕರದ ಕ್ರಮಕ್ಕೆ ನಾನು ಹೆದರಿಕೊಳ್ಳುವುದಿಲ್ಲ. ರಾಜ್ಯ ಸರ್ಕಾರ 6 ತಿಂಗಳಿಂದ ಸುಮ್ಮನಿದ್ದು, ಈಗ ಮೇಲ್ಮನವಿ ಸಲ್ಲಿಸುತ್ತಿದೆ. ದೇವರು ಅವರಿಗೆ ಒಳ್ಳೆಯದು ಮಾಡಲಿ. ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಸುಪ್ರೀಂ ಕೋರ್ಟ್​ನಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಈ ಹಿಂದಿನ ಎಲ್ಲಾ ಮುಖ್ಯಮಂತ್ರಿಗಳೂ ಡಿನೋಟಿಫಿಕೇಷನ್ ಮಾಡಿದ್ದಾರೆ. ನಾನೂ ಸಹ ರೈತರಿಗೆ ಸಹಾಯವಾಗುವಂತಹ ಡಿನೋಟಿಫೀಕೇಷನ್ ಮಾಡಿದ್ದೇನೆ ಎಂದು ಯಡಿಯೂರಪ್ಪ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com