ಬರದಿಂದ ಜನತೆ ಪರದಾಟ, ಗಾಲ್ಫ್ ಆಡುತ್ತಾ ಐಎಎಸ್‌ ಅಧಿಕಾರಿಗಳ ಮೋಜಿನಾಟ: ಎಚ್ ಡಿಕೆ ವಾಗ್ದಾಳಿ

ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳು ಹವಾನಿಯಂತ್ರಿತ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 

ಬೆಂಗಳೂರು: ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳು ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಮೋಜು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ನಿರ್ವಹಣೆಯ ಉಸ್ತುವಾರಿ ವಹಿಸಬೇಕಿದ್ದ ಐಎಎಸ್‌ ಅಧಿಕಾರಿಗಳು ಗಾಲ್ಫ್ ಆಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಸರ್ಕಾರರ ಮೊದಲು ಅವರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಹಾರಾಷ್ಟ್ರದಷ್ಟು ಬರ ಇಲ್ಲ ಎಂದು ಸಿಎಂ ಹಾಗೂ ಸಚಿವರ ಹೇಳಿಕೆ ನಾಚಿಕೆಗೇಡು ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com