

ಬೆಂಗಳೂರು: ಪುತ್ರ ರಾಕೇಶ್ ಅಕಾಲಿಕ ಮರಣದಿಂದ ಮೌನಕ್ಕೆ ಜಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತದ ಬಗ್ಗೆ ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಳೆ ಸಂಬಂಧಿತ ಅವಾಂತರಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನು ಸಿಎಂ ತರಾಟೆಗೆ ತೆಗೆದುಕೊಂಡರು. ಮುಂದೆ ಸಮಸ್ಯೆಗಳಾಗದಂತೆ ಎಚ್ಚರ ವಹಿಸಲು ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಮಾಜಿ ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭಾಗವಹಿಸಿದ್ದರು
ಆದರೆ ಸಭೆಯಲ್ಲಿ ಏಕೆ ಭಾಗವಹಿಸಿದ್ದೀರಿ ಎಂದು ಮಾಧ್ಯಮವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾರ್ಜ್ ನಾನು ಬೆಂಗಳೂರು ಶಾಸಕ ಹಾಗಾಗಿ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದು ಸಮರ್ಥನೆ ನೀಡಿದರು.