ಮೇಯರ್ ಚುನಾವಣೆ: ಜೆಡಿಎಸ್ ಜೊತೆ ಹೊಂದಾಣಿಕೆಗೆ ಬಿಜೆಪಿ ಒಲವು

ಬಿಬಿಎಂಪಿ ಮೇಯರ್ ಚುನಾವಣೆ ಸಂಬಂಧ ಬಿಜೆಪಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಬಯಸಿದ್ದು, ಈ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿವೆ....
ಆರ್. ಅಶೋಕ್ ಮತ್ತು ಅನಂತ್ ಕುಮಾರ್
ಆರ್. ಅಶೋಕ್ ಮತ್ತು ಅನಂತ್ ಕುಮಾರ್

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ಸಂಬಂಧ ಬಿಜೆಪಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಬಯಸಿದ್ದು, ಈ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿವೆ.

ಬಿಬಿಎಂಪಿಯಲ್ಲಿ ಜನಾದೇಶ ಪಡೆದಿದ್ದರೂ ಕಾಂಗ್ರೆಸ್ ಹಿಂಬಾಗಿಲಿನಿಂದ ಪ್ರವೇಶ ಪಡೆದು ಅಧಿಕಾರ ನಡೆಸುತ್ತಿದೆ. ಈಗ ಅದಕ್ಕೆ ಕೊನೆಬೀಳುವ ವಾತಾವರಣ ಸೃಷ್ಟಿಯಾಗಿದ್ದು, ಬದಲಾವಣೆಯ ಸಮಯ ಬಂದಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ.

ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಸಂಬಂಧ ಜೆಡಿಎಸ್ ಜೊತೆ ಮಾಜಿ ಡಿಸಿಎಂ ಆರ್. ಅಶೋಕ್ ಮಾತುಕತೆ ನಡೆಸುತ್ತಿದ್ದಾರೆ ಎಂದು ಅನಂತ್ ಕುಮಾರ್ ಹೇಳಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಎಚ್ಚರಿಕೆ ಹೆಜ್ಜೆ ಇಡುವ ಅವಶ್ಯಕತೆ ಇದೆ. ಜೆಡಿಎಸ್ ಜತೆ ಮೈತ್ರಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಜತೆ ಒಂದು ಸುತ್ತು ಮಾತುಕತೆ ನಡೆಸಿದ್ದೇವೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಜತೆಗೂ ರ್ಚಚಿಸಲಾಗುವುದು. ಅದಕ್ಕೂ ಮುನ್ನ ಪಕ್ಷದ ಹಿರಿಯ ನಾಯಕರೊಂದಿಗೆ ರ್ಚಚಿಸುತ್ತೇವೆ. ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಿದೆ.

ಮೇಯರ್ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಪಕ್ಷದ ಕೆಲ ಮುಖಂಡರು ಜೆಡಿಎಸ್ ಜತೆ ರ್ಚಚಿಸುವ ವಿಚಾರ ಗೊತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರೊಂದಿಗೆ ಚರ್ಚೆ ಮಾಡುವುದಾಗಿ ಅಶೋಕ್ ನೀಡಿರುವ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡು ಬಿಬಿಎಂಪಿ ಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಕಸರತ್ತು ಆರಂಭಿಸಿದೆ. ಇನ್ನೊಂದೆಡೆ ಜೆಡಿಎಸ್​ನೊಂದಿಗಿನ ಮೈತ್ರಿ ಮುಂದುವರಿಸಿಕೊಂಡು ಪಾಲಿಕೆ ಆಡಳಿತ ಚುಕ್ಕಾಣಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಕಾಂಗ್ರೆಸ್ ಕೂಡ ತನ್ನ ಪ್ರಯತ್ನ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ಮನವೊಲಿಕೆಗೆ ಸಚಿವ ರಾಮಲಿಂಗಾರೆಡ್ಡಿ ಮುಂದಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಭೇಟಿಯಾದ ರಾಮಲಿಂಗಾರೆಡ್ಡಿ, ಮೈತ್ರಿ ಮುಂದುವರಿಸುವ ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಈ ಕುರಿತು ಉಭಯ ನಾಯಕರು ಒಂದು ಗಂಟೆ ಕಾಲ ರ್ಚಚಿಸಿದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com