ರಾಕೇಶ್ ಸಿದ್ದರಾಮಯ್ಯ ಹೆಸರಲ್ಲಿ ಯಕೃತ್ ಕಸಿಯೋಜನೆ ಜಾರಿಗೆ ಸಿಎಂ ಚಿಂತನೆ

ರಾಕೇಶ್ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಖಾಸಗಿ ಫೌಂಡೇಶನ್ ಅಥವಾ ಸರ್ಕಾರದ ವತಿಯಿಂದ ಯಕೃತ್ ಕಸಿಯೋಜನೆಯನ್ನು ಜಾರಿಗೊಳಿಸುವ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಕೇಶ್ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಖಾಸಗಿ ಫೌಂಡೇಶನ್ ಅಥವಾ ಸರ್ಕಾರದ ವತಿಯಿಂದ ಯಕೃತ್ ಕಸಿಯೋಜನೆಯನ್ನು ಜಾರಿಗೊಳಿಸುವ ಸಂಬಂಧ  ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೆಜೆಸ್ಟಿಕ್ ಬಳಿ ಇರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ 218ನೇ ಜನ್ಮ ದಿನಾಚರಣೆ ಅಂಗವಾಗಿ ಮಾಲಾರ್ಪಣೆ ಮಾಡಿದ ನಂತರ ವಾಟಾಳ್ ನಾಗರಾಜ್ ಅವರ ಮನವಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ವಾಟಾಳ್ ನಾಗರಾಜ್ ಅವರು ರಾಕೇಶ್ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಯಕೃತ್ ಕಸಿ ಯೋಜನೆ ಜಾರಿಗೊಳಿಸುವಂತೆ ಸಲಹೆ ನೀಡಿದ್ದಾರೆ.ಸರ್ಕಾರದಿಂದ ಸಾಧ್ಯವಾಗದೇ ಇದ್ದರೆ ರಾಕೇಶ್ ಫೌಂಡೇಶನ್ ಸ್ಥಾಪಿಸಿ ಅದರಿಂದಲಾದರೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ಯಕೃತ್ ಕಸಿ ಯೋಜನೆಯನ್ನು ಜಾರಿಗೊಳಿಸುವಂತೆ ಹೇಳಿದ್ದಾರೆ.

ವಾಟಾಳ್ ನಾಗರಾಜ್ ಅವರ  ಸಲಹೆಗಳನ್ನು ಗಂಭೀರವಾಗಿ ಪರಿಶೀಲಿಸಲಾಗುವುದು. ಈ ಯೋಜನೆಯನ್ನು ಯಾವ ಹಂತದಲ್ಲಿ ಜಾರಿಗೊಳಿಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸುವುದಾಗಿ ಹೇಳಿದರು.

ಸಿಎಂ, ಮಹದಾಯಿ, ಕಳಸಾಬಂಡೂರಿ ಯೋಜನೆಗಾಗಿ ಹೋರಾಟ ನಡೆಸಿದ ರೈತರ ಮೇಲಿನ ಮೊಕದ್ದಮೆಗಳನ್ನು ದೋಷಾರೋಪಪಟ್ಟಿ ಸಲ್ಲಿಕೆಯಾದ ನಂತರ ಹಿಂಪಡೆಯಲಾಗುವುದು. ಈಗಾಗಲೇ ಇವರ ಬಿಡುಗಡೆಗೆ ರಾಜ್ಯ ಸರ್ಕಾರ ಸಹಕರಿಸಿದೆ ಎಂದ ಅವರು ಸಂಗೊಳ್ಳಿ ರಾಯಣ್ಣ ಅವರ ಗುಣಗಾನ ಮಾಡಿದ ಮುಖ್ಯಮಂತ್ರಿ ಅವರು, ಬೆಂಗಳೂರಿನ ಮೆಟ್ರೊಗೆ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ನಾಮಕರಣ ಮಾಡುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com