ಕಾವೇರಿ ಅಚ್ಚುಕಟ್ಟು ವ್ಯಾಪ್ತಿ ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವುದರಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಚಳವಳಿ ಹಾದಿ ಹಿಡಿಯಲಾಗಿದೆ. ತಮಿಳುನಾಡಿಗೆ ಮೂರು ತಿಂಗಳಿಂದ 43 ಟಿಎಂಸಿ ನೀರು ಹರಿದಿದೆ. ಆದರೆ, ಕಾವೇರಿ ಅಚ್ಚುಕಟ್ಟು ಭಾಗದ ರೈತರಿಗೆ ಕೇವಲ 7.5 ಟಿಎಂಸಿ ನೀರು ನೀಡಿದ್ದಾರೆ. ಈಗ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಇನ್ನು 50 ಟಿಎಂಸಿ ನೀರಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ ಬರೆದುಕೊಂಡು ಕುಳಿತಿದ್ದಾರೆ. ಕೇವಲ ಪತ್ರದ ಮುಖೇನ ರಾಜ್ಯದ ವಾಸ್ತವ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ ಎಂದರು.