ಮಂಗಳೂರಿನಲ್ಲಿ ರಮ್ಯಾಗೆ ಮುತ್ತಿಗೆ, ಮೊಟ್ಟೆ ಎಸೆತ

ಪಾಕಿಸ್ತಾನ ಪರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ರಮ್ಯಾ
ರಮ್ಯಾ
Updated on
ಮಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ, ಅವರ ಕಾರಿನತ್ತ ಮೊಟ್ಟೆ ಎಸೆದ ಘಟನೆ ಗುರುವಾರ ನಡೆದಿದೆ.
ಪಾಕ್‌ ಪರ ಹೇಳಿಕೆ ನೀಡಿದ ಬೆನ್ನಲ್ಲೇ ಮಾಧ್ಯಮ ಸಂದರ್ಶನದಲ್ಲಿ ಮಂಗಳೂರು ನರಕ ಎಂದು ಇನ್ನೊಂದು ವಿವಾದ ಹುಟ್ಟು ಹಾಕಿದ್ದ ರಮ್ಯಾ ವಿರುದ್ಧ ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ವಿಮಾನ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಲ್ಲದೆ ರಮ್ಯಾ ಸಾಗುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ.
ರಮ್ಯಾ ವಿಮಾನ ನಿಲ್ದಾಣದಿಂದ ಹೊರ ಬರುವಾಗ ಅಲ್ಲಿ ಸೇರಿದ್ದ ಪ್ರತಿಭಟನಾಕಾರರು ರಮ್ಯಾ ಗೋ ಬ್ಯಾಕ್ ಎಂದು ಕೂಗಿ, ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್‌ ಹಾಕಿದರು.
ತಕ್ಷಣ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದಿದ್ದಾರೆ. 
ರಮ್ಯಾ ಗುರುವಾರ ರಾತ್ರಿ ಕದ್ರಿಯ ಮೈದಾನದಲ್ಲಿ ನಡೆಯುವ ರಸಮಂಜರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com