ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಸಿಎಂ ವಿಶ್ವಾಸ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಅಧಿಕಾರರೂಢ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ...
ಮೈಸೂರಿನಲ್ಲಿ ಮಂಗಳವಾರ ನಡೆದ ಜನತಾ ದರ್ಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಯಲ್ಲಿ ಹಿಡಿದಿದ್ದು, ಎಲ್ಲರ ಅಚ್ಚರಿಗೆ ಕಾರಣವಾಯಿತು. ಸಿಎಂಗೆ ಉಗುರು ಸುತ್ತು ಆಗಿದೆ. ಹೀಗಾಗ
ಮೈಸೂರಿನಲ್ಲಿ ಮಂಗಳವಾರ ನಡೆದ ಜನತಾ ದರ್ಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಯಲ್ಲಿ ಹಿಡಿದಿದ್ದು, ಎಲ್ಲರ ಅಚ್ಚರಿಗೆ ಕಾರಣವಾಯಿತು. ಸಿಎಂಗೆ ಉಗುರು ಸುತ್ತು ಆಗಿದೆ. ಹೀಗಾಗ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಅಧಿಕಾರರೂಢ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ಮೈತ್ರಿ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯ ಯಾವುದೇ ಘರ್ಷಣೆ ನಡೆದಿಲ್ಲ ಮತ್ತು ಮೈತ್ರಿ ಮುಂದುವರಿಯಲಿದೆ ಎಂದರು.
ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾಕೆ ಭೇಟಿ ಮಾಡಿದ್ದಾರೋ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ. ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಉತ್ತಮ ಬಾಂಧವ್ಯವಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ವಿರಸ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಮಧ್ಯೆ ಜೆಡಿಎಸ್ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸೆಪ್ಟೆಂಬರ್ 3ರಂದು ಸಭೆ ಕರೆದಿದ್ದು, ಸಭೆಯಲ್ಲಿ ಮೈತ್ರಿ ಮುಂದುವರೆಸಲು ಒಪ್ಪಿಗೆ ಸಿಕ್ಕರೆ ಉಪ ಮೇಯರ್ ಯಾರಾಗಬೇಕು ಎಂದೂ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸದ್ಯ, ಮೇಯರ್ ಆಗಿರುವ ಬಿ.ಎನ್.ಮಂಜುನಾಥ್ ರೆಡ್ಡಿ(ಕಾಂಗ್ರೆಸ್) ಮತ್ತು ಉಪ ಮೇಯರ್ ಎಸ್.ಪಿ.ಹೇಮಲತಾ (ಜೆಡಿಎಸ್) ಅವರ ಅಧಿಕಾರಾವಧಿ ಸೆಪ್ಟೆಂಬರ್ 14ರಂದು ಕೊನೆಗೊಳ್ಳಲಿದೆ. ಸೆ.19ರಂದು ನೂತನ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com