ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ, ಆರ್ ಎಸ್ ಎಸ್ ಬ್ರಿಟಿಷರ ಜೊತೆಗಿತ್ತು: ರಮ್ಯಾ

ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಆರ್ ಎಸ್ ಎಸ್ ಪಾತ್ರ ಏನೂ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ..
ರಮ್ಯಾ
ರಮ್ಯಾ
Updated on

ಮಂಡ್ಯ: ಯಾಕೋ, ಏನೋ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಟೈಮ್ ಸರಿಯಿಲ್ಲ ಅಂತಾ ಅನ್ಸುತ್ತೆ. ಬಾಯಿ ಬಿಟ್ಟರೇ ಬಣ್ಣಗೇಡು ಅನ್ನೋ ಮಾತಿನಂತೆ, ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ರಮ್ಯ ಸುದ್ದಿಯಾಗುತ್ತಿದ್ದಾರೆ.

ಪಾಕಿಸ್ತಾನ ನರಕವಲ್ಲ, ಮಂಗಳೂರು ನರಕ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಒಳಗಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಆರ್ ಎಸ್ ಎಸ್ ಪಾತ್ರ ಏನೂ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಗರಿಗೆದರಿದ್ದಾರೆ.

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ ಯುಐ) 'ವಿದ್ಯಾರ್ಥಿಗಳ ನಡೆ ದೇಶದ ಬೆಳವಣಿಗೆ ಕಡೆ' ಘೋಷಣೆಯಡಿ ನಡೆಸಿದ ಜಾಥಾದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ, ದೇಶಕ್ಕೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ ಪಕ್ಷ ಕಾರಣ. ಬಿಜೆಪಿ, ಆರ್ ಎಸ್ ಎಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಆರೋಪಿಸಿದರು. 

ಸ್ವಾತಂತ್ರ್ಯ ಹೋರಾಟ ಸಂಗ್ರಾಮದ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿಯವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com