ಬೆಂಗಳೂರು: ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿ ಹಣಕಾಸು ಮೀಸಲಿಟ್ಟಿದೆ. ನಿವೇಶನ ಲಭ್ಯವಿರುವ ಜಿಲ್ಲೆಗಳಲ್ಲಿ ಅ. 2ರಂದು 'ಗಾಂಧಿ ಭವನ' ಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುವ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಎಚ್. ಎಸ್ ದೊರೆಸ್ವಾಮಿ ಸೇರಿದಂತೆ ಇತರ ಸ್ವಾತಂತ್ರ್ಯ ಹೋರಾಟಗಾರ ಜೊತೆ ನಡೆದ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯಗಾಂಧಿ ಭವನ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ನಿಗದಿ ಮಾಡಿರುವುದರಿಂದ ಹಣಕಾಸಿನ ಸಮಸ್ಯೆ ಇಲ್ಲ. ನಿರ್ಮಾಣವಾಗುವ ಗಾಂಧಿ ಭವನಗಳ ನಿರ್ವಹಣೆ ಮತ್ತು ಸದಾ ಚಟುವಟಿಕೆಗಳಿಂದ ಕೂಡಿರಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಸರಕಾರಿ ಶಾಲೆಗಳಿಗೆ ಖಾದಿ ಸಮವಸ್ತ್ರ ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿ ಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಖಾದಿ ಸಮವಸ್ತ್ರ ಪೂರೈಸುವುದು ಒಳ್ಳೆಯ ಸಲಹೆ. ಈ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
Advertisement