ಸಿಎಂ ಸಿದ್ದರಾಮಯ್ಯ, ಮೂವರು ಸಚಿವರಿಂದ ಶೀಘ್ರ ರಾಜಿನಾಮೆ: ಬಿಎಸ್‌ವೈ ಭವಿಷ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವ ಅವರ ಸಂಪುಟದ ಮೂವರು ಸಚಿವರು ಶೀಘ್ರ ರಾಜಿನಾಮೆ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on: 
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವ ಅವರ ಸಂಪುಟದ ಮೂವರು ಸಚಿವರು ಶೀಘ್ರ ರಾಜಿನಾಮೆ ನೀಡುವ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ಭವಿಷ್ಯ ನುಡಿದಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯ ಸರ್ಕಾರದ ಹಲವು ಸಚಿವರುಗಳು ದೊಡ್ಡ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿದ್ದು, ಕೆಲವರಿಗೆ ಮುಂದಿನ ದಿನಗಳಲ್ಲಿ ಶಿಕ್ಷೆಯಾಗಲಿದೆ ಎಂದರು. 
ಉಕ್ಕಿನ ಸೇತುವೆ ಹಾಗೂ ಎತ್ತಿನಹೊಳೆ ಹಗರಣದಲ್ಲಿ ಸಚಿವರುಗಳು ಭಾರಿ ಕಮಿಷನ್‌ ಪಡೆದಿರುವುದು ಕಂಡು ಬಂದಿದೆ. ಅಲ್ಲದೆ ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿರುವ ಅಮಾನತುಗೊಂಡ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು  ಜಯಚಂದ್ರ ಅವರೊಂದಿಗೆ ಸಂಪುಟದ ಸಚಿವರು ಕೋಟ್ಯಾಂತರ ರುಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದವೂ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಮುಖ್ಯಮಂತ್ರಿಗಳು ತುಂಬಾನೇ ಹಗುರವಾಗಿ ಮಾತನಾಡುತ್ತಿದ್ದು, ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳುತ್ತಿದ್ದಾರೆ. ಆದರೆ ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಸಿಕ್ಕಿ ಬಿದ್ದಿರುವ ಅಧಿಕಾರಿಗಳೊಂದಿಗೆ ಶಾಮೀಲಾಗಿರುವ ಸಚಿವರುಗಳ ಹೆಸರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com