2018 ರ ಚುನಾವಣೆಯಲ್ಲಿ ಕುಟುಂಬದಿಂದ ನಾನು ಮತ್ತು ರೇವಣ್ಣ ಮಾತ್ರ ಸ್ಪರ್ಧೆ: ಎಚ್ ಡಿಕೆ

2018 ರ ವಿಧಾನಸಭೆ ಚುನಾವಣೆಯಲ್ಲಿ ನಾನು ಮತ್ತು ಎಚ್.ಡಿ.ರೇವಣ್ಣ ಹೊರತು ಪಡಿಸಿ ಕುಟುಂಬದಿಂದ ಮತ್ಯಾರೂ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 

ಬೆಂಗಳೂರು: 2018 ರ ವಿಧಾನಸಭೆ ಚುನಾವಣೆಯಲ್ಲಿ ನಾನು ಮತ್ತು ಎಚ್.ಡಿ.ರೇವಣ್ಣ ಹೊರತು ಪಡಿಸಿ ಕುಟುಂಬದಿಂದ ಮತ್ಯಾರೂ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರ ಜೆಡಿಎಸ್ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ಸದಸ್ಯರು ಲೋಕಸಭೆ ಚುನಾವಣೆ ವೇಳೆ ಸ್ಪರ್ಧೆ ಮಾಡಬೇಕೆ ಬೇಡವೇ ಎನ್ನುವುದು ಸದ್ಯಕ್ಕೆ ಅಪ್ರಸ್ತುತ ಎಂದು ಹೇಳುವ ಮೂಲಕ ಭವಾನಿ ರೇವಣ್ಣ, ಅನಿತಾ ಕುಮಾರಸ್ವಾಮಿ, ಪ್ರಜ್ವಲ್ ಹಾಗೂ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಎಲ್ಲಾ ಊಹಾ ಪೋಹಾಗಳಿಗೆ ತೆರೆ ಎಳೆದಿದ್ದಾರೆ.

ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡವಿದೆ. ಆದರೆ ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಜೆಡಿಎಸ್ ನಮ್ಮ ಕುಟುಂಬಕ್ಕೆ ಮಾತ್ರ ಸೇರಿದ ಪಕ್ಷವಲ್ಲ. ಪಕ್ಷ ತೊರೆದು ರಾಜಕಾರಣದಲ್ಲಿ ಕೆಲವರು ನಿಷ್ಕ್ರಿಯರಾಗಿದ್ದಾರೆ. ಅಂಥವರ ಮನೆ ಬಾಗಿಲಿಗೆ ಹೋಗಿ ವಾಪಸ್ ಪಕ್ಷಕ್ಕೆ ಕರೆತರುತ್ತೇನೆ. ಪಕ್ಷ ತೊರೆಯಲು ನಾನೇ ಕಾರಣವಾಗಿದ್ದರೆ, ನನ್ನ ತಪ್ಪಿದ್ದರೆ ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com