ಭ್ರಷ್ಟ ಸಚಿವರ ಹೆಸರು ಗೊತ್ತಿದ್ದರೆ ಬಹಿರಂಗಪಡಿಸಿ: ಬಿಎಸ್'ವೈಗೆ ಎಂ.ಬಿ ಪಾಟೀಲ್

ಆಡಳಿತಾರೂಢ ಪಕ್ಷದ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಶೀಘ್ರದಲ್ಲೇ ಸಚಿವರ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ನಿಜಕ್ಕೂ ಬಿಎಸ್'ವೈಗೆ ಅಕ್ರಮ ಎಸಗಿರುವ ಸಚಿವರ ಹೆಸರು ಗೊತ್ತಿದ್ದರೆ...
ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್
ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ಆಡಳಿತಾರೂಢ ಪಕ್ಷದ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಶೀಘ್ರದಲ್ಲೇ ಸಚಿವರ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ನಿಜಕ್ಕೂ ಬಿಎಸ್'ವೈಗೆ ಅಕ್ರಮ ಎಸಗಿರುವ ಸಚಿವರ ಹೆಸರು ಗೊತ್ತಿದ್ದರೆ ಬಹಿರಂಗಪಡಿಸಲಿ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿರುವ ಎಂ.ಬಿ, ಪಾಟೀಲ್ ಅವರು, ಸಚಿವರ ಬಣ್ಣ ಬಯಲಾಗುತ್ತದೆ ಎಂದು ಹೇಳಲು ಯಡಿಯೂರಪ್ಪ ಅವರೇನು ಸಿಬಿಐ ನಿರ್ದೇಶಕರೇ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಭ್ರಷ್ಟ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರೂ ಇದೆ ಎಂದು ಆರೋಪಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅವರು, ನಾನು ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಅಕ್ರಮ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ, ಇಡಿ ಹಾಗೂ ಎಸಿಬಿಯಂತಹ ಸಂಸ್ಥೆಗಳಿವೆ. ನಾವು ಭ್ರಷ್ಟಾಚಾರ ನಡೆಸಿದ್ದೇ ಆಗಿದ್ದರೆ, ಸಿಬಿಐ ಹಾಗೂ ಎಸಿಬಿ ಅಧಿಕಾರಿಗಳು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆಂದು ತಿಳಿಸಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಯಡಿಯೂರಪ್ಪ ಅವರು, ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರ ಹಗರಣಗಳು ಇನ್ನೆರಡು ದಿನಗಳಲ್ಲಿ ಬಯಲಾಗುತ್ತದೆ. ಬಯಲಾಗುವ ಎಲ್ಲಾ ಹಗರಣಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬುಡಕ್ಕೆ ಬರುತ್ತದೆ. ಕಾದು ನೋಡಿ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com