
ಬೆಂಗಳೂರು: ನಾನು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಬೇಕು ಎಂದು ನಿರ್ಧರಿಸಿದ್ದೆ ಆದರೆ ಸಿಎಂ ಸಿದ್ದರಾಮಯ್ಯ ಅವರ ವರ್ತನೆ, ನನ್ನನ್ನು ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಕಾರಣ ನೀಡದಿದ್ದದ್ದು ನನಗೆ ತುಂಬಾ ನೋವುಂಟು ಮಾಡಿದೆ ಎಂದು ಮಾಜಿ ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು. ಸಿದ್ದರಾಮಯ್ಯ ಅವರು ನನ್ನ ಜೊತೆ ನಡೆದುಕೊಂಡು ರೀತಿ ಹಾಗೂ ಅವರ ವರ್ತನೆ, ನಾನು ಉಪ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವಂತೆ ಮಾಡಿದೆ. ಅನಾವಶ್ಯಕವಾಗಿ ಮತ್ತೊಂದು ಚುನಾವಣೆ ಎಂದುರಾಗಿದ್ದಕ್ಕೆ ನಾನು ನಂಜನಗೂಡು ಜನತೆ ಬಳಿ ಕ್ಷಮೆ ಯಾಚಿಸುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ನಂಜನಗೂಡು ವಿಧಾನ ಸಭೆಗೆ ಟಿಕೆಟ್ ಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿಸಿದ ಅವರು, ನಂಜನಗೂಡು ವಿಧಾನಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರ್ಧರಿಸುವುದಾಗಿ ಹೇಳಿದ್ದಾರೆ. ಜನವರಿ 2 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಲಿದ್ದಾರೆ.
Advertisement