ಕೆ.ಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಜರುಗಿಸುವ ಸೂಚನೆ ನೀಡಿದ ಬಿಎಸ್ ವೈ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರನ್ನು ಬರ ಅಧ್ಯಯನ ಸಮಿತಿಯಿಂದ ಹೊರಗಿಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈಶ್ವರಪ್ಪ ವಿರುದ್ಧ ಕ್ರಮ ...
ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ
Updated on

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರನ್ನು ಬರ ಅಧ್ಯಯನ ಸಮಿತಿಯಿಂದ ಹೊರಗಿಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ.

ಮಹಾಭಾರತದಲ್ಲಿ ಕೃಷ್ಣನ ಜನ್ಮವಾಗುವ ಮುಂಚೆಯೇ ಕಂಸನಿಗೆ ಭಯ ಕಾಡಲು ಆರಂಭಿಸಿದಂತೆ ಬ್ರಿಗೇಡ್ ಆರಂಭಕ್ಕೆ ಮುನ್ನವೇ ಯಡಿಯೂರಪ್ಪ ಅವರಿಗೆ ಭಯ ಕಾಡತೊಡಗಿದೆ ಎಂದು ಲೇವಡಿ ಮಾಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ,  ಕಂಸ ಯಾರು ಎಂಬುದು ಮುಂದಿನ ದಿನಗಳಲ್ಲಿ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಬರ ಅಧ್ಯಯವ ಪ್ರವಾಸ ಮಾಡುತ್ತಿರುವ ಯಡಿಯೂರಪ್ಪ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಾತನಾಡಿದ ಅವರು, ಕೆ.ಎಸ್ಈಶ್ವರಪ್ಪ ಅವರು ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಅವರನ್ನು ಬರ ಅಧ್ಯಯಯನ ಪ್ರವಾಸ ತಂಡದಿಂದ ಕೈ ಬಿಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರು ಸಮನ್ಸ್ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com