

ಬೀದರ್: ಹೆಬ್ಟಾಳ ಮತ್ತು ಬೀದರ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ಪರವಾಗಿಲ್ಲ. ಆದರೆ, ಕಾಂಗ್ರೆಸ್‌ನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕಿಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ಹೆಬ್ಟಾಳ ಮತ್ತು ಬೀದರ್ ಎರಡೂ ಕ್ಷೇತ್ರಗಳಲ್ಲಿ ಈ ಹಿಂದೆ ಸೋಲನುಭವಿಸಿದ್ದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೆಡಿಎಸ್‌ಗೆ ಜಾತ್ಯತೀತ ತತ್ವದಲ್ಲಿ ನಂಬಿಕೆ ಇದ್ದಲ್ಲಿ ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಬೇರೆ ಸಮಾಜದವರನ್ನು ಸ್ಪರ್ಧೆಗೆ ಇಳಿಸಬಹುದಿತ್ತು. ಆದರೆ, ಹೆಬ್ಟಾಳ ಮತ್ತು ಬೀದರ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ಪರವಾಗಿಲ್ಲ. ಆದರೆ, ಕಾಂಗ್ರೆಸ್‌ನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಕಿಡಿಕಾರಿದರು.
ಜೆಡಿಎಸ್ ಶಾಸಕರು ಜಾತ್ಯತೀತ ತತ್ವ ಪಾಲಿಸುವುದಾದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೇರವಾಗಿ ಬೆಂಬಲ ಕೊಡಲಿ ಎಂದು ಸವಾಲು ಹಾಕಿದರು.ಉಪ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ಹರಿಹಾಯ್ದರು.