
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ದಿಗಂಬರರಾಗಿ ಓಡಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಲಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.
ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದಲ್ಲಿ ಪಕ್ಷದ ವತಿಯಿಂದ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದುಳಿದವರು ವಾಚ್ ಕಟ್ಟಿದರೆ, ಚಪ್ಪಲಿ, ಕನ್ನಡಕ ಹಾಕಿದರೆ ತಪ್ಪಾ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳು ವಾಚ್ ಕಟ್ಟಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪ ಆಧಾರರಹಿತ. ನಂಬಬೇಡಿ. ಅವರು ಬರೀ ಸುಳ್ಳು ಹೇಳುತ್ತಾರೆ ಎಂದು ಹರಿ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು
Advertisement