ರಾಮನಗರಕ್ಕೆ ನಾನೇ ಮುಖ್ಯಮಂತ್ರಿ: ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯಾದರೇ ನಾನು ರಾಮನಗರ ಜಿಲ್ಲೆಗೆ ಸಿಎಂ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on: 

ರಾಮನಗರ: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯಾದರೇ ನಾನು ರಾಮನಗರ ಜಿಲ್ಲೆಗೆ ಸಿಎಂ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲೆ ಬಿಳಗುಂಬ ಗ್ರಾಮದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳು ನೆಪಮಾತ್ರಕ್ಕೆ ಸ್ಪರ್ಧಿಸಿದ್ದಾರೆ. ಡಿ.ಕೆ. ಶಿವಕುಮಾರ್ ಸ್ವತಃ ಸ್ಪರ್ಧಿಸಿದ್ದಾರೆ ಎಂದು ಭಾವಿಸಿ ಮತದಾರರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಆಡಳಿತ ಮುಂದುವರೆಯುತ್ತದೆ. ಆಡಳಿತ ಪಕ್ಷದೊಂದಿಗೆ ಹೊಂದಾಣಿಕೆ ಇದ್ದರೆ ಅಭಿವೃದ್ಧಿ ಸಾಧ್ಯವೆಂದು ಸ್ವತಃ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹಲವಾರು ಬಾರಿ ಹೇಳಿದ್ದಾರೆ. ಹೀಗಾಗಿ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದರು.

ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ರಾಮನಗರ ಜಿಲ್ಲೆಯನ್ನು ರೂಪಿಸಿದ್ದು ಬಿಟ್ಟರೆ ಇನ್ಯಾವ ಅಭಿವೃದ್ಧಿ ಕೆಲಸವನ್ನ ಮಾಡಲಿಲ್ಲ. ಹಾಲಿ ಶಾಸಕರಾಗಿ ಅವರು ಪ್ರಗತಿ ಪರಿಶೀಲನಾ ಸಭೆಗಳಲ್ಲೂ ಹಾಜರಾಗುತ್ತಿಲ್ಲ ಎಂದು ಶಿವಕುಮಾರ್ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com