ಉಪ ಚುನಾವಣೆಗಳಲ್ಲಿ ಎನ್ ಡಿಎಗೆ ಬಹುಮತ; ಯುಪಿಎಗೆ ಮುಖಭಂಗ

ಈ ಬಾರಿ ವಿವಿಧ ರಾಜ್ಯಗಳಲ್ಲಿ ನಡೆದ ಉಹಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮೈತ್ರಿಕೂಟಗಳು ಅಧಿಕ ಸ್ಥಾನಗಳಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಈ ಬಾರಿ ವಿವಿಧ ರಾಜ್ಯಗಳಲ್ಲಿ ನಡೆದ ಉಹಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮೈತ್ರಿಕೂಟಗಳು ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎನ್ ಡಿಎ ಮೈತ್ರಿಕೂಟಕ್ಕೆ ಆನೆಬಲ ಬಂದಂತಾಗಿದೆ.

ಕರ್ನಾಟಕದ ಹೆಬ್ಬಾಳ, ಬೀದರ್ ಹಾಗೂ ದೇವದುರ್ಗ ಕ್ಷೇತ್ರಗಳಲ್ಲಿ ಬಿಜೆಪಿ ಹೆಬ್ಬಾಳ ಮತ್ತು ದೇವದುರ್ಗ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಬೀದರ್ ನಲ್ಲಿ ಮಾತ್ರ ಗೆದ್ದಿದೆ. ಇನ್ನು ರಾಜ್ಯದ ಮತ್ತೊಂದು ಪ್ರಮುಖ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಠೇವಣಿಯನ್ನು ಕಳೆದುಕೊಂಡಿದೆ.

ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕೋಮು ಸೂಕ್ಷ್ಮ ಕ್ಷೇತ್ರಗಳನಿಸಿರುವ ಅಲ್ಲಿನ ದಿಯೊಬಂದ್ ನಲ್ಲಿ ಕಾಂಗ್ರೆಸ್ ಜಯ ಗಳಿಸಿದರೆ, ಮುಜಾಫರ್ ನಗರದಲ್ಲಿ ಬಿಜೆಪಿ ಯಶಸ್ಸು ಕಂಡಿದೆ. ಸಮಾಜವಾದಿ ಪಕ್ಷ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿದೆ.

ಇನ್ನು ಬಿಹಾರದ ಹರ್ಲಾಕ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರ ಆರ್ ಎಲ್ ಎಸ್ ಪಿ ಗೆದ್ದು, ಆರ್ ಜೆಡಿ-ಜೆಡಿಯು-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸೋತಿದ್ದಾರೆ.

ಪಂಜಾಬ್ ನ ಖದೂರ್ ಸಾಹಿಬ್ ಕ್ಷೇತ್ರದಲ್ಲಿ ರಾಜ್ಯದ ಆಡಳಿತಾರೂಢ ಅಕಾಲಿ ದಳ್ ಸ್ವತಂತ್ರ ಅಭ್ಯರ್ಥಿ ವಿರುದ್ಧ ಗೆದ್ದಿದ್ದಾರೆ. ಇಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮಹಾರಾಷ್ಟ್ರದಲ್ಲಿ ಶಿವಸೇನೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ತೆಲಂಗಾಣದಲ್ಲಿ ಟಿಆರ್ ಎಸ್, ಮಧ್ಯ ಪ್ರದೇಶದಲ್ಲಿ ಬಿಜೆಪಿ ಸ್ಥಾನವನ್ನು ಉಳಿಸಿಕೊಂಡಿವೆ. ಹೀಗೆ ದೇಶಾದ್ಯಂತ ಒಟ್ಟು  12 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎನ್ ಡಿಎ 7 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com