ರಾಜ್ಯಪಾಲರನ್ನು ಅಧಿವೇಶನದ ಭಾಷಣ ಮಾಡಲು ಆಹ್ವಾನಿಸಿದ ಸಿಎಂ

ಸೋಮವಾರದಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ...
ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ವಜುಭಾಯಿ ವಾಲಾಗೆ ಸಿಎಂ ಸಿದ್ದರಾಮಯ್ಯ ಆಹ್ವಾನ
ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ವಜುಭಾಯಿ ವಾಲಾಗೆ ಸಿಎಂ ಸಿದ್ದರಾಮಯ್ಯ ಆಹ್ವಾನ
Updated on: 
ಬೆಂಗಳೂರು: ಸೋಮವಾರದಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಪರವಾಗಿ ಭಾಷಣ ಮಾಡಲು ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದು, ಅಧಿವೇಶನದಲ್ಲಿ ಸರ್ಕಾರದ ಪರವಾಗಿ ಭಾಷಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ. 
ಅಷ್ಟೇ ಅಲ್ಲದೇ, ಮುಖ್ಯಮಂತ್ರಿಗಳು ಲೋಕಾಯುಕ್ತ ಸ್ಥಾನಕ್ಕೆ ಶಿಫಾರಸು ಮಾಡಿರುವ ನ್ಯಾ.ಎಸ್ ಆರ್ ನಾಯಕ್ ಹೆಸರಿಗೆ ಒಪ್ಪಿಗೆ ಸೂಚಿಸಬೇಕಾಗಿ ರಾಜ್ಯಪಾಲರನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com