ಲೋಕಲ್ ಫೈಟ್‍ಗೆ ಹೈಕೋರ್ಟ್ ತಡೆ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ದಿನಾಂಕ ಪ್ರಕಟಣೆಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ...
ಹೈಕೋರ್ಟ್
ಹೈಕೋರ್ಟ್
ಕಲಬುರಗಿ/ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ದಿನಾಂಕ ಪ್ರಕಟಣೆಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. 
ಕಲಬುರಗಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಜಿಪಂ, ತಾಪಂ ಸ್ಥಾನಗಳ ಮೀಸಲಾತಿ ಯಲ್ಲಿ ಅನ್ಯಾಯವಾಗಿದೆ ಎಂದು ಸಲ್ಲಿಕೆಯಾಗಿದ್ದ ಅರ್ಜಿಗಳ ಸಂಬಂಧ ನ್ಯಾ. ರಾಮಮೋಹ ನ ರೆಡ್ಡಿ ಅವರಿದ್ದ ಪೀಠ ಈ ಆದೇಶ ನೀಡಿದೆ. ಅಲ್ಲದೆ, ರಾಜ್ಯ ಚುನಾವಣಾ ಆಯೋಗ ಹೊರಡಿ ಸಿರುವ ಮೀಸಲಾತಿ ಅಧಿಸೂಚನೆಗೂ ಅದು ತಡೆಯೊಡ್ಡಿದೆ. 
ಇದೇ ವೇಳೆ, ಬೆಂಗಳೂರಿನ ಹೈಕೋರ್ಟ್ ಪೀಠ ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚುನಾವಣೆ ಕುರಿತ ಗೊಂದಲಗಳಿಗೆ ಸಂಬಂಧಿಸಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡುವುದು ಸರಿಯಾದ ಕ್ರಮವಲ್ಲ ಎಂದಿತು. 
ಜಿ.ಪಂ. ಚುನಾವಣೆಯ ರೊಟೇಶನ್ ಮತ್ತು ಮೀಸಲು ನಿಗದಿ ಕುರಿತು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠಕ್ಕೆ ಚುನಾವಣಾ ದಿನಾಂಕ ಘೋಷಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಗುರುವಾರ ಮನವಿ ಮಾಡಿದರು. 
ಒಟ್ಟು 80 ಅರ್ಜಿಗಳು ಸಲ್ಲಿಕೆಯಾಗಿದ್ದು, ಬಹುತೇಕ ಎಲ್ಲದರಲ್ಲೂ ಸಂವಿಧಾನ ಬಾಹಿರ ಎಂದು ದೂರಲಾಗಿದೆ. ಅಲ್ಲದೆ ಈ ಮೀಸಲು ಸಂವಿಧಾನದ ಅನುಚ್ಛೇದ 243ಡಿಯ ಸಂಪೂರ್ಣ ವಿರುದ್ಧವಾಗಿದೆ. ಈ ಅನು ಚ್ಛೇದದ ಅನುಸಾರ ಪಂಚಾಯ್ತಿಯ ಎಲ್ಲ ಕ್ಷೇತ್ರಗಳಲ್ಲೂ ಪ್ರತಿ ಐದು ವರ್ಷಕ್ಕೊಮ್ಮೆ ಆವರ್ತನ ಆಗಬೇಕು. ಆದರೆ ಆಯೋಗವು ಸಂವಿಧಾನದ ಈ ಆಶಯಕ್ಕೆ ವಿರುದ್ಧವಾಗಿ ಪ್ರತಿ 10 ವರ್ಷಕ್ಕೊಮ್ಮೆ ಎಂದು ಆವರ್ತನ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com