ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್‌ರಿಂದ ನಾಮಪತ್ರ ಸಲ್ಲಿಕೆ

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಅವರ ಮೊಮ್ಮಗ...
ನಾಮಪತ್ರ ಸಲ್ಲಿಸಿದ ಬಳಿಕ ಸಚಿವ ರಾಮಲಿಂಗಾರೆಡ್ಡಿ ಹಾಗೂ ರೆಹಮಾನ್ ಷರೀಫ್.
ನಾಮಪತ್ರ ಸಲ್ಲಿಸಿದ ಬಳಿಕ ಸಚಿವ ರಾಮಲಿಂಗಾರೆಡ್ಡಿ ಹಾಗೂ ರೆಹಮಾನ್ ಷರೀಫ್.
ಬೆಂಗಳೂರು: ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಅವರ ಮೊಮ್ಮಗ ರೆಹಮಾನ್ ಷರೀಫ್ ಅವರು ಬುಧವಾರ ಹೆಬ್ಬಾಳ ವಿಧಾಸಭೆ ಉಪ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ರೆಹಮಾನ್ ಷರೀಫ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ, ಸಂಸದ ರಾಜೀವ್ ಗೌಡ ಹಾಗೂ ಮಾಜಿ ಸಂಸದ ನಾರಾಯಣಸ್ವಾಮಿ ಅವರು ರೆಹಮಾನ್ ಷರೀಫ್‌ಗೆ ಸಾಥ್ ನೀಡಿದರು.
ಫೆಬ್ರುವರಿ 13ರಂದು ಹೆಬ್ಬಾಳ, ದೇವದುರ್ಗ ಹಾಗೂ ಬೀದರ್ ಉತ್ತರ ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳ ಉಮೇದುವಾರರು ನಾಮಪತ್ರ ಸಲ್ಲಿಸಿದ್ದು, ಚುನಾವಣಾ ಅಖಾಡ ರಂಗೇರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಚುನಾವಣೆ ಪ್ರತಿಷ್ಠೆ ಪ್ರಶ್ನೆಯಾಗಿದ್ದರೂ ಹೆಬ್ಬಳಾದಲ್ಲಿ ತಮ್ಮ ಆಪ್ತ ಭೈರತಿ ಸುರೇಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುವುದರಲ್ಲಿ ವಿಫಲವಾಗಿರುವುದು ಅವರ ಮುಂದಿನ ನಡೆ ಬಗ್ಗೆ ಕುತೂಹಲ ಕೆರಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com