
ಬೆಂಗಳೂರು: ರಾಜ್ಯದ ಮೂರು ವಿಧಾನ ಸಭೆ ಕ್ಷೇತ್ರಗಳ ಉಪ ಚುವಾವಣೆ ಪ್ರಚಾರ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ದರಾಗಿದ್ದು, ಭಾನುವಾರ ಹೆಬ್ಬಾಳ ಕ್ಷೇತ್ರದಲ್ಲಿ ಮತ ಯಾಚಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ನಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವುದಕ್ಕಾಗಿ ಪಕ್ಷದ ಅಭ್ಯರ್ಥಿ ರೆಹಮಾನ್ ಷರೀಫ್ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಇಳಿಯಲಿದ್ದಾರೆ. ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಹೆಬ್ಬಾಳ ಹಲವು ಕಾರಣಗಳಿಗೆ ಪ್ರತಿಷ್ಠಿತ ಕಣವಾಗಿದೆ. ಮೂರು ರಾಜಕೀಯ ಪಕ್ಷಗಳು ಹಗ್ಗ ಜಗ್ಗಾಟದ ಮೇಲೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ.
ಭಾನುವಾರ ರಜೆ ಹಿನ್ನೆಲೆಯಲ್ಲಿ ಮತದಾರರನ್ನು ನೇರವಾಗಿ ಕಂಡು ಮನವೊಲಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ಸಿದ್ದವಾಗಿದ್ದು, ಇಂಧನ ಸಚಿವ ಡಿ.ಕೆ ಶಿವಕುಮಾರ್ ಸಾರಥ್ಯದಲ್ಲಿ ಗೆಲುವಿಗೆ ಚುನಾವಣಾ ತಂತ್ರಗಳನ್ನು ರೂಪಿಸಲಾಗುತ್ತಿದೆ. ಈಗ ಮುಖ್ಯ ಮಂತ್ರಿಗಳೇ ಪ್ರಚಾರಕ್ಕೆ ಧುಮುಕುತ್ತಿದ್ದಾರೆ.
ಮಹಾ ಸಂಪರ್ಕ ಅಭಿಯಾನ: ಇತ್ತ ಬಿಜೆಪಿ ಅಭ್ಯರ್ಥಿ ವೈ.ಎ ನಾರಾಯಣ ಸ್ವಾಮಿ ಪರವಾಗಿ ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದಗೌಡ ಭಾನುವಾರ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 7 ರಿಂದಲೇ ಮಹಾ ಸಂಪರ್ಕ ಅಭಿಯಾನ ಆರಂಭಗೊಳ್ಳಲಿದೆ.
Advertisement