ಸರ್ಕಾರದ ಮೌಢ್ಯ ನಿಷೇಧ ಕಾಯ್ದೆ ಜನ ವಿರೋಧಿ ಕಾಯ್ದೆಯಾಗಿದೆ: ಶೆಟ್ಟರ್

ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ನಿರ್ಮೂಲನಾ ಕಾಯ್ದೆ-2016 ಜನ ವಿರೋಧಿ ಕಾಯ್ದೆಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...
ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್
ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ನಿರ್ಮೂಲನಾ ಕಾಯ್ದೆ-2016 ಜನ ವಿರೋಧಿ ಕಾಯ್ದೆಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಮೌಢ್ಯ ನಿಷೇಧ ಕಾಯ್ದೆ ಕುರಿತು ಸಂಪುಟ ಸಭೆ ಚರ್ಚೆ ನಡೆಸುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರ ಜಾರಿಗೆ ತರಲಿರುವ ಹೊಸ ಕಾಯ್ದೆ ಜನರ ಭಾವನೆಗಳಿಗೆ ನೋವುಂಟು ಮಾಡಲಿದೆ. ಸರ್ಕಾರದ ಹೊಸ ಕಾಯ್ದೆಯನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಕಾನೂನು ಎಂಬ ಹೆಸರಿಟ್ಟುಕೊಂಡು ಸರ್ಕಾರ ಜನರಿಗೆ ಕಿರುಕುಳ ನೀಡಿದಂತಾಗುತ್ತದೆ. ಹೋಮ, ಹವನಗಳನ್ನು ಮಾಡುವ ಜನರನ್ನು ಕಾಯ್ದೆ ತಡೆಹಿಡಿಯಲಿದೆ. ಅಮಾನವೀಯ ಚಟುವಟಿಕೆಗಳನ್ನು ತಡೆಯಲು ಸರ್ಕಾರ ಯತ್ನಿಸುತ್ತಿರುವುದೇ ಆದರೆ, ಅದಕ್ಕೆ ಸರಿಯಾದ ದಾರಿಯನ್ನು ಕಂಡುಕೊಳ್ಳಲಿ. ಜನರಿಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾಯ್ದೆಯನ್ನು ಜಾರಿಗೆ ತಂದಿದ್ದೇ ಆದರೆ, ಕಾಂಗ್ರೆಸ್ ಸಾರ್ವಜನಿಕರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com