ಹೇಮಂತ್ ನಿಂಬಾಳ್ಕರ್ ನೇತೃತ್ವದ ಸಿಐಡಿ ತನಿಖೆ ಬಗ್ಗೆ ಶೆಟ್ಟರ್ ಸಂಶಯ

ವಿಧಾನಸಭೆಯ ಉಭಯ ಸದನಗಳಲ್ಲಿ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ತೀವ್ರ ಕೋಲಾಹಲ ಉಂಟು ಮಾಡಿದ್ದು, ಪ್ರಕರಣ ಸಂಬಂಧ...
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆ
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆ
ಬೆಂಗಳೂರು: ವಿಧಾನಸಭೆಯ ಉಭಯ ಸದನಗಳಲ್ಲಿ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ತೀವ್ರ ಕೋಲಾಹಲ ಉಂಟು ಮಾಡಿದ್ದು, ಪ್ರಕರಣ ಸಂಬಂಧ ಬೆಂಗಳೂರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ರಾಜಿನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ರಾಜ್ಯ ಸರ್ಕಾರ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಇನ್ನು ಗಣಪತಿ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸುತ್ತಿರುವ ಹೇಮಂತ್ ನಿಂಬಾಳ್ಕಕರ್ ನೇತೃತ್ವದ ತಂಡದ ಬಗ್ಗೆಯೂ ಸಂಶಯ ವ್ಯಕ್ತಪಡಿಸಿದ ಶೆಟ್ಟರ್, ಸಿಐಡಿ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರು ಈ ಹಿಂದೆ ತಮ್ಮ ಪತ್ನಿಗೆ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದರು ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪರವಾಗಿರುವ ಮಹಿಳೆಯ ಪತಿ ನಿಂಬಾಳ್ಕರ್ ಅವರ ತನಿಖೆಯಿಂದ ನ್ಯಾಯ ನೀರಿಕ್ಷೆ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಜಾರ್ಜ್ ರಾಜಿನಾಮೆಗೆ ಆಗ್ರಹ
ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಿಧಾನಮಂಡಲ ಕಲಾಪದ ಆರಂಭದಲ್ಲಿಯೇ ಆಡಳಿತ ಪಕ್ಷಕ್ಕೆ ಬಿಸಿ ಬಿಟ್ಟಿಸಿದರು. ಜಾರ್ಜ್ ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದನದ ಬಾವಿಗಿಳಿದು ಪ್ರತಿಭಟಿಸಿತು. ಪರಿಣಾಮ ಕೆಲ ಕಾಲ ಸದನದಲ್ಲಿ ಕೋಲಾಹಲ ಸೃಷ್ಟಿಯಾಯಿತು.
ಪ್ರಮುಖ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರ ಈಗ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದೆ ಎಂದು ಆರೋಪಿಸಿ ಆತ್ಮಹತ್ಯೆ ಭಾಗ್ಯ ಎಂಬ ಪೊಸ್ಟರ್ ಹಿಡಿದು ಪ್ರತಿಭಟಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com