ಜಾರ್ಜ್ ರಾಜಿನಾಮೆಗೆ ಪಟ್ಟು: ಸದನದಲ್ಲಿ ಬಿಜೆಪಿ, ಜೆಡಿಎಸ್ ನಿಂದ ಅಹೋರಾತ್ರಿ ಧರಣಿ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್...
ಕುಮಾರಸ್ವಾಮಿ - ಜಗದೀಶ್ ಶೆಟ್ಟರ್
ಕುಮಾರಸ್ವಾಮಿ - ಜಗದೀಶ್ ಶೆಟ್ಟರ್
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳು, ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ಆಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿವೆ.
ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ನಾಯಕ ಕುಮಾರ್ ಸ್ವಾಮಿ ಅವರು, ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಂಗ ತನಿಖೆಗೆ ಒಪ್ಪಿಸಿರುವ ನಿರ್ಧಾರವನ್ನು ವಿರೋಧಿಸಿ ಹಾಗೂ ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಅಧಿವೇಶನ ಮುಗಿಯುವವರೆಗೆ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿರುವುದಾಗಿ ಘೋಷಿಸಿದರು.
ಸಿದ್ದರಾಮಯ್ಯನವರು ಸಚಿವ ಜಾರ್ಜ್ ಮತ್ತು ಅಧಿಕಾರಿಗಳ ರಕ್ಷಣೆಗೆ ನಿಂತಿದ್ದಾರೆ. ನ್ಯಾಯಾಂಗ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿರುವುದಾಗಿ ಪ್ರತಿಪಕ್ಷಗಳ ನಾಯಕರು ತಿಳಿಸಿದ್ದಾರೆ.
ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಾರೆ ಅಂತ ಅಂದ್ಕೊಂಡಿದ್ದೇವು. ಆದರೆ ತನಿಖೆಯನ್ನು ವಿಳಂಬ ಮಾಡೋದಕ್ಕಾಗಿಯೇ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ನ್ಯಾಯಾಂಗ ತನಿಖೆಯಿಂದ ಸತ್ಯ ಮುಚ್ಚಿ ಹಾಕಲಾಗುತ್ತದೆ.  ಜಾರ್ಜ್ ರಾಜೀನಾಮೆ ಪಡೆಯುವತನಕ ಧರಣಿ ನಡೆಸುತ್ತೇವೆ ಎಂದು ಶೆಟ್ಟರ್ ಹೇಳಿದರು. ಅಲ್ಲದೆ ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com