ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಅಹೋರಾತ್ರಿ ಧರಣಿ ಕೈಗೊಂಡರು ಕೆ.ಜೆ.ಜಾರ್ಜ್ ರಾಜಿನಾಮೆ ಪಡೆಯುತ್ತಿಲ್ಲ ಎಂದರು. ಅಲ್ಲದೆ ಯಾವುದೇ ಚರ್ಚೆಯಿಲ್ಲದೆ ಎಲ್ಲಾ ಇಲಾಖೆಯ ಪ್ರಮುಖ ವಿಧೇಯಕಗಳನ್ನು ಅಂಗೀಕರಿಸಿರುವ ಸರ್ಕಾರ, ವಿಧಾನಸಭೆ ಕಲಾಪವನ್ನು ನಾಳೆಯಿಂದ ಅನಿರ್ಧಿಷ್ಟಾವಧಿಗೆ ಮುಂದೂಡುವ ಕುತಂತ್ರ ನಡೆಸಿದೆ ಎಂದು ಆರೋಪಿಸಿದರು.