
ಮೈಸೂರು: ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ನಿಂದಿಸಿದ ಆರೋಪ ಎದುರಿಸುತ್ತಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಸಿದ್ದರಾಮಯ್ಯ ಆಪ್ತರಲ್ಲ, ಅವರು ಕಾಂಗ್ರೆಸ್ ನಾಯಕರುಗಳಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಪುತ್ರ ರಾಕೇಶ್ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ನಂತರ ಮಾತನಾಡಿದ ರಾಕೇಶ್ ಸಿದ್ದರಾಮಯ್ಯ , ಮರೀಗೌಡ ಅವರ ತಪ್ಪು ಮಾಡಿದ್ದು ಸಾಬೀತಾದರೆ ಶಿಕ್ಷೆ ಅನುಭವಿಸಲಿ. ಇದರಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಪ್ರಕರಣಕ್ಕೂ ತಂದೆಗೂ ತಳಕು ಹಾಕುವುದು ಸರಿಯಲ್ಲ ಎಂದು ಹೇಳಿದರು.
ಕಳೆದ 15 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಆಸೆ ನನಗೂ ಇದೆ. ತಮ್ಮ ತಂದೆ ಸಿದ್ದರಾಮಯ್ಯ ಅವರು ಸೂಚಿಸಿದ ಕ್ಷೇತ್ರದಲ್ಲಿ ಕಣಕ್ಕೆ ಇಳಿಯಲಿದ್ದೇನೆ, ತಂದೆಯವರ ಸೂಚನೆಗೆ ಕಾಯುತ್ತಿದ್ದೇನೆ ಎಂದು ರಾಕೇಶ್ ತಿಳಿಸಿದ್ದಾರೆ.
Advertisement