ಜಾರ್ಜ್ ರಕ್ಷಣೆಗಾಗಿ ಸಿಎಂ ಮೈನಾರಿಟಿ ಕಾರ್ಡ್ ಪ್ಲೇ: ಶೋಭಾ ಕರಂದ್ಲಾಜೆ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್ ಅವರನ್ನು ರಕ್ಷಿಸಲು ಸಿಎಂ ಸಿದ್ದರಾಮಯ್ಯ ಮೈನಾರಿಟಿ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಸಂಸದೆ ..
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Updated on: 

ಮೈಸೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್ ಅವರನ್ನು ರಕ್ಷಿಸಲು ಸಿಎಂ ಸಿದ್ದರಾಮಯ್ಯ ಮೈನಾರಿಟಿ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಕಾಂಗ್ರೆಸ್ ಹೈ ಕಮಾಂಡ್ ಆಡಳಿತದಲ್ಲಿ ಉತ್ತಮ ಅನುಭವ ಇರುವ ಹಿರಿಯ ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿರುವ ಅವರು ಇನ್ನೂ ಎರಡು ವರ್ಷಗಳ ರಾಜ್ಯದ ಜನತೆ ಸಿಎಂ ಅವರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಜಾರ್ಜ್ ಅವರನ್ನು ಪ್ರಕಣದಿಂದ ರಕ್ಷಿಸಲು ಹಗರಲಿರುಳು ಶ್ರಮಿಸುತ್ತಿದ್ದಾರೆ ಎಂದು ಶೋಭಾ ದೂರಿದ್ದಾರೆ.

ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಅವರು, ಈ ಹಿಂದೆ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣದಲ್ಲೂ ಜಾರ್ಜ್ ಹೆಸರು ಕೇಳಿ ಬಂದಿತ್ತು.ಈಗಲೂ ಅವರ ಹೆಸರು ಕೇಳಿ ಬಂದಿದೆ ಎಂದು ಹೇಳಿದರು.

ಯಾವುದೇ ಕಾರಣವಿಲ್ಲದೇ, ಶ್ರಿನೀವಾಸ್ ಪ್ರಸಾದ್. ಮತ್ತು ಅಂಬರೀಷ್ ಅವರನ್ನು ಸಂಪುಟದಿಂದ ಕೈ ಬಿಟ್ಟ ಸಿದ್ದರಾಮಯ್ಯ ಈಗ ಕಳಂಕ ಹೊತ್ತಿರುವ ಜಾರ್ಜ್ ಅವರ ರಾಜೀನಾಮೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಚಿಕ್ಕಮಗಳೂರು ಎಸ್ಪಿ ಅವರ ವಿರುದ್ಧ ತನಿಖೆ ನಡೆಸಬೇಕು ಹಾಗೂ ಗಣಪತಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com