ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣ: ಜಾರ್ಜ್‌ ತಲೆದಂಡಕ್ಕೆ ಎಚ್ ಡಿಕೆ ಪರೋಕ್ಷ ಕಾರಣ

ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ರಾಜೀನಾಮೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ..
Published on

ಬೆಂಗಳೂರು: ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ರಾಜೀನಾಮೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಕಾರಣವಾಗಿದ್ದಾರೆ.

ಮಡಿಕೇರಿಯಲ್ಲಿ ಎಂ.ಕೆ ಗಣಪತಿ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದ ಕುಮಾರಸ್ವಾಮಿ ನ್ಯಾಯಾಲಯದ ಮೊರೆ ಹೋಗುವಂತೆ ಸಲಹೆ ಮತ್ತು ನೆರವು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರನ ಹೇಳಿಕೆಯನ್ನೇ ಪ್ರಮುಖವಾಗಿ ಪರಿಗಣಿಸಿ ಎಫ್ಐಆರ್‌ ದಾಖಲಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದ ಕುಮಾರಸ್ವಾಮಿ ಅವರು ಅದಕ್ಕಾಗಿ ವಕೀಲರ ನೆರವನ್ನೂ ಕೊಟ್ಟಿದ್ದರು. ನಂತರ ಈ ಬಗ್ಗೆ ಬಹಿರಂಗವಾಗಿಯೂ ಹೇಳಿಕೆ ನೀಡಿದ್ದರು

ಕುಮಾರಸ್ವಾಮಿ ಅವರ ಸಲಹೆ ಮತ್ತು ನೆರವು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಜೆ.ಜಾರ್ಜ್‌ ಈಗ ತಮ್ಮ ಸಚಿವ ಸ್ಥಾನ ಕಳೆದುಕೊಳ್ಳಲು ಪ್ರಮುಖ ಕಾರಣವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com