ಜಮೀರ್ ಅಹಮದ್, ಚಲುವರಾಯಸ್ವಾಮಿ ಸಂಚಿನ ಬಗ್ಗೆ ನನಗೆ ತಿಳಿದಿದೆ: ಎಚ್.ಡಿ ದೇವೇಗೌಡ

ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಸ್ಟಿಂಗ್ ಆಪರೇಷನ್ ಮಾಡಲಾಗಿದೆ, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಷಡ್ಯಂತ್ರ ಇದೆ ಎಂದು ಮಾಜಿ ಪ್ರಧಾನಿ ಹಾಗೂ
ಎಚ್.ಡಿ ದೇವಗೌಡ
ಎಚ್.ಡಿ ದೇವಗೌಡ
Updated on

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಸ್ಟಿಂಗ್ ಆಪರೇಷನ್ ಮಾಡಲಾಗಿದೆ, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಷಡ್ಯಂತ್ರ ಇದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ರಹಸ್ಯ ಕಾರ್ಯಾಚರಣೆನಡೆಸಿ ಶಾಸಕರ ಕುದುರೆ ವ್ಯಾಪಾರ ಬಯಲಿಗೆಳದ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಮುಗಿಸಲು ಮಾಡಿರುವ ಸಂಚು ಇದು . ಇದರಲ್ಲಿ ಯಾವುದೇ ಸಂಶಯ ಇಲ್ಲ. ಕಳೆದ ಮೂರು ವರ್ಷಗಳಿಂದ ಜಮೀರ್‌ ಅಹ್ಮದ್‌ ಮತ್ತು ಚಲುವರಾಯ ಸ್ವಾಮಿ ಏನೇನು ಸಂಚು ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತು,ಆದರೂ ನಾನು ಶಿಸ್ತು ಕ್ರಮ ಕೈಗೊಂಡಿಲ್ಲ ಎಂದರು.

ಬಸವಕಲ್ಯಾಣ ಜೆಡಿಎಸ್‌ ಶಾಸಕ ಮಲ್ಲಿಕಾರ್ಜುನ ಖೂಬಾ ,ಚಾಮುಂಡೇಶ್ವರಿ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸ್ಟಿಂಗ್‌ನಲ್ಲಿ ಸಿಲುಕಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಖೂಬಾ ಅಂತಹವನಲ್ಲ, ಹುಡುಗಾಟಿಕೆಗೆ ಹಾಗೇ ಹೇಳಿರಬೇಕು, ಜಿ.ಟಿ. ದೇವೇಗೌಡರಿಗೂ ಸ್ಟಿಂಗ್‌ಗೂ ಸಂಬಂಧವಿಲ್ಲ  ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com